ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಗಲಿದೆ. ಆದರೆ, ವಾರಾಂತ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಮೊದಲೆ ಬಸವನಗುಡಿಯಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಬಸವನಿಗೆ ಕಡಲೆಕಾಯಿ ಹಾಗೂ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತಿದೆ. ಕನಕಪುರ, ದೊಡ್ಡಬಳ್ಳಾಪುರ, ರಾಮನಗರ, ಮಾಗಡಿ, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆಯಿಂದ ವ್ಯಾಪಾರಿಗಳು ಕಡಲೆಕಾಯಿ ತಂದು ಮಾರಾಟ ಮಾಡುತ್ತಾರೆ. ಈಗಾಗಲೇ ಪರಿಷೆ ನಡೆಯುತ್ತಿರುವುದರಿಂದ ವಾಹನ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel