Advertisement
ಸುದ್ದಿಗಳು

ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ

Share

ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ  ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 23 ರಿಂದ 26 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳು: ಫಲಪುಷ್ಪ ಪ್ರದರ್ಶನದ ಅಂಗವಾಗಿ ಮುಖ್ಯ ಆಕರ್ಷಣೆಯಾಗಿ ಹೂವುಗಳಿಂದ ವಿವಿಧ ಕಲಾಕೃತಿಯನ್ನು ತಯಾರಿಸಿ ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ.

ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ಕದ್ರಿ ಉದ್ಯಾನವನದಲ್ಲಿ ಸುಮಾರು 15 ಸಾವಿರ ಸಂಖ್ಯೆಯ 30 ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಪೆಟೂನಿಯಾ, ಟೊರಿನೋ, ಇತ್ಯಾದಿ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಹಾಗೂ ತರಕಾರಿ ಕೈತೋಟದ ಪ್ರಾತ್ಯಕ್ಷತೆಯನ್ನು ಏರ್ಪಡಿಸಲಾಗುತ್ತದೆ.

ಹಣ್ಣು ಮತ್ತು ತರಕಾರಿಗಳಿಂದ ಜಿಲ್ಲೆಯ ಪ್ರಾಮುಖ್ಯತೆಯ ಬಗ್ಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರುಗಳ ಕಲಾಕೃತಿಗಳನ್ನು ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶಗಳನ್ನು ಏರ್ಪಡಿಸಲಾಗುತ್ತದೆ. ವಿವಿಧ ಜೇನು ಸಹಕಾರ ಸಂಘ, ರೈತ ಉತ್ಪಾದಕರ ಸಂಸ್ಥೆಗಳಿಂದ ಜೇನಿನ ವಿವಿಧ ತಳಿಗಳ, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಜೇನಿನ ಔಷಧೀಯ ಗುಣಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಸಸ್ಯ ಉತ್ಸವ ಏರ್ಪಡಿಸಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತದೆ.

ಫಲಪುಷ್ಪ ಪ್ರದರ್ಶನದಲ್ಲಿ ವಯಸ್ಕರಿಗೆ ರೂ 30 ರೂ.ಗಳು ಮತ್ತು ಮಕ್ಕಳಿಗೆ ರೂ 20  ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಶಾಲಾ ಶಿಕ್ಷಕರೊಂದಿಗೆ ಸಮವಸ್ತ್ರದಲ್ಲಿ ಆಗಮಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತದೆ.

ರೈತರು ಬೆಳೆದಿರುವಂತಹ ವಿಶಿಷ್ಠ ಬಗೆಯ ಹಣ್ಣು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳು, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದಂತಹ ಪ್ರದರ್ಶಿಕೆಗಳನ್ನು ಜನವರಿ 22 ರಂದು ಬೆಳಿಗ್ಗೆ 10.30 ಗಂಟೆಗೆ ಕದ್ರಿ ಉದ್ಯಾನವನಕ್ಕೆ ತರಬೇಕು ಎಂದು ತೋಟಗಾರಿಕೆ ಇಲಾಖೆ  ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

10 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

10 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

10 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

10 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago