ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಬೆಳೆ ವಿಮೆ | ಬೆಳೆ ವಿಮೆಯಿಂದಾಗಿ ರೈತರಲ್ಲಿ ಸಂತಸ

August 31, 2025
9:59 PM

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ 20 ಲಕ್ಷದ 77 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು, ಕಲಬುರಗಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ವಿಮೆ ಮಾಡಿಸಿದ್ದಾರೆ.

ಮುಂಗಾರು ಹಂಗಾಮಿನ ಬೆಳೆಗಳಾದ ತೊಗರಿ, ಹತ್ತಿ, ಭತ್ತ, ರಾಗಿ, ಮೆಕ್ಕೆಜೋಳ, ಸೊಯಾಬಿನ್, ಹೆಸರು, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ನೋಂದಾವಣೆ  ಮಾಡಿಸಿದ್ದಾರೆ. ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ,  ಹಳ್ಳಿ ಹಳ್ಳಿಗೂ ತೆರಳಿ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗಿದೆ. ಇದರಿಂದ 3 ಲಕ್ಷದ 1 ಸಾವಿರದ ರೈತರು,  3 ಲಕ್ಷ 61 ಸಾವಿರದ 590 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದೆ ಎಂದು ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ರೈತರು ಬೆಳೆ ವಿಮೆ ಮಾಡಿಸಿದ್ದು, ಜಿಲ್ಲೆಯಲ್ಲಿ 31 ಸಾವಿರ ಕೃಷಿಕರು ಬೆಳೆ ವಿಮೆ ಮಾಡಿಸಿದ್ದಾರೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror