ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ 20 ಲಕ್ಷದ 77 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು, ಕಲಬುರಗಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ವಿಮೆ ಮಾಡಿಸಿದ್ದಾರೆ.
ಮುಂಗಾರು ಹಂಗಾಮಿನ ಬೆಳೆಗಳಾದ ತೊಗರಿ, ಹತ್ತಿ, ಭತ್ತ, ರಾಗಿ, ಮೆಕ್ಕೆಜೋಳ, ಸೊಯಾಬಿನ್, ಹೆಸರು, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ನೋಂದಾವಣೆ ಮಾಡಿಸಿದ್ದಾರೆ. ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ , ಹಳ್ಳಿ ಹಳ್ಳಿಗೂ ತೆರಳಿ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗಿದೆ. ಇದರಿಂದ 3 ಲಕ್ಷದ 1 ಸಾವಿರದ ರೈತರು, 3 ಲಕ್ಷ 61 ಸಾವಿರದ 590 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದೆ ಎಂದು ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ರೈತರು ಬೆಳೆ ವಿಮೆ ಮಾಡಿಸಿದ್ದು, ಜಿಲ್ಲೆಯಲ್ಲಿ 31 ಸಾವಿರ ಕೃಷಿಕರು ಬೆಳೆ ವಿಮೆ ಮಾಡಿಸಿದ್ದಾರೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….

