ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.
ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೂಡಾ ಕಡೆಗಣಿಸಿ ಯಾವುದೇ ಪ್ರೋಟೋಕಾಲ್ ಪಾಲನೆ ಮಾಡದೆ ಕಾರ್ಯಕ್ರಮ ಮಾಡಲಾಗಿದೆ. ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…