ಸುಳ್ಯ ತಾಲೂಕಿನ ಕಲ್ಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾಭಿವೃದ್ಧಿ ಸಮಿತಿ , ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಜ.26 ರಂದು ಪಕ್ಷಿಗಳ ಛಾಯಾಚಿತ್ರ ಪ್ರದರ್ಶನ ಬೆಳಗ್ಗೆ 9 ರಿಂದ 1 ಗಂಟೆಯವರೆಗೆ ನಡೆಯಲಿದೆ.
ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹಾಗೂ ರಾಧಾಕೃಷ್ಣ ಉಡುವೆಕೋಡಿ ಅವರು ತೆಗೆದಿರುವ ಪಕ್ಷಿಗಳ ಚಿತ್ರ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮವನ್ನು ಶಾಲಾಮುಖ್ಯ ಶಿಕ್ಷಕಿ ವಜ್ರಾಕ್ಷಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ವಹಿಸುವರು. ಕಾರ್ಯಕ್ರಮದಲ್ಲಿ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ, ಕೃಷಿಕ ವನ್ಯಜೀವಿ ಛಾಯಾಗ್ರಾಹಕ ರಾಧಾಕೃಷ್ಣ ಉಡುವೆಕೋಡಿ ಉಪಸ್ಥಿತರಿರುವರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel