ಕಲ್ಮಡ್ಕ ಗ್ರಾಮ ಪಂಚಾಯತ್‌ಗೆ ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ |

October 31, 2023
10:12 PM

 ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ ಹಾಗೂ ಬೇಕಾದ ಸಲಕರಣೆಗಾಗಿ ಓಡಾಟ ಇರುತ್ತದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಚೆಗೆ ಶವಸಂಸ್ಕಾರಕ್ಕೆ ಶವಪೆಟ್ಟಿಗೆಯ ಮಾದರಿಯೊಂದು ಗ್ರಾಮೀಣ ಭಾಗಕ್ಕೂ ಅನುಕೂಲವಾಗಿದೆ. ಈಗಾಗಲೇ ಹಲವು ಕಡೆ  ಈ ಪೆಟ್ಟಿಗೆಯನ್ನು ಪಂಚಾಯತ್‌ ಮಟ್ಟದಲ್ಲಿ ಸಂಗ್ರಹಿಸಲಾಗುತ್ತಿದೆ. ಕಲ್ಮಡ್ಕ ಗ್ರಾಮ ಪಂಚಾಯತ್‌ ಗೆ ಕೂಡಾ ಇದೀಗ  ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ  ಮಾಡಲಾಗಿದೆ.

Advertisement

ಶವ ಸಂಸ್ಕಾರಕ್ಕಾಗಿ ಶವಪೆಟ್ಟಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಉಸ್ತುವಾರಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ,ಪಂಬೆತ್ತಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಕಾರದಿಂದ ಶವಪೆಟ್ಟಿಗೆಯನ್ನು ಖರೀದಿಸಿದ್ದು ಶವ ಸಂಸ್ಕಾರಕ್ಕೆ ಉಚಿತವಾಗಿ ನೀಡಲು ಸಿರ್ಧರಿಸಿ, ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ , ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ  ಅಬ್ದುಲ್ ಗಫೂರ್ ಇವರು ಸ್ವಾಗತಿಸಿದರು , ಮಹೇಶ್ ಕರಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಇವರು ವಂದಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |
April 22, 2025
7:18 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ
April 22, 2025
6:51 AM
by: The Rural Mirror ಸುದ್ದಿಜಾಲ
ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!
April 22, 2025
6:41 AM
by: ದ ರೂರಲ್ ಮಿರರ್.ಕಾಂ
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ
April 22, 2025
6:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group