ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ ಹಾಗೂ ಬೇಕಾದ ಸಲಕರಣೆಗಾಗಿ ಓಡಾಟ ಇರುತ್ತದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಚೆಗೆ ಶವಸಂಸ್ಕಾರಕ್ಕೆ ಶವಪೆಟ್ಟಿಗೆಯ ಮಾದರಿಯೊಂದು ಗ್ರಾಮೀಣ ಭಾಗಕ್ಕೂ ಅನುಕೂಲವಾಗಿದೆ. ಈಗಾಗಲೇ ಹಲವು ಕಡೆ ಈ ಪೆಟ್ಟಿಗೆಯನ್ನು ಪಂಚಾಯತ್ ಮಟ್ಟದಲ್ಲಿ ಸಂಗ್ರಹಿಸಲಾಗುತ್ತಿದೆ. ಕಲ್ಮಡ್ಕ ಗ್ರಾಮ ಪಂಚಾಯತ್ ಗೆ ಕೂಡಾ ಇದೀಗ ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ ಮಾಡಲಾಗಿದೆ.
ಶವ ಸಂಸ್ಕಾರಕ್ಕಾಗಿ ಶವಪೆಟ್ಟಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಉಸ್ತುವಾರಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ,ಪಂಬೆತ್ತಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಕಾರದಿಂದ ಶವಪೆಟ್ಟಿಗೆಯನ್ನು ಖರೀದಿಸಿದ್ದು ಶವ ಸಂಸ್ಕಾರಕ್ಕೆ ಉಚಿತವಾಗಿ ನೀಡಲು ಸಿರ್ಧರಿಸಿ, ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ , ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್ ಇವರು ಸ್ವಾಗತಿಸಿದರು , ಮಹೇಶ್ ಕರಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಇವರು ವಂದಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…