ಮಳೆನೀರು ವ್ಯರ್ಥವಾಗದಂತೆ ತಡೆಯಲು ₹200 ಕೋಟಿ – ಕಲ್ಯಾಣ ಕರ್ನಾಟಕದಲ್ಲಿ ಜಲಕ್ರಾಂತಿಗೆ ಸಿದ್ಧತೆ

November 28, 2026
10:27 AM
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ 200 ಕೋಟಿ ರೂಪಾಯಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸರಣಿ ಚೆಕ್‌ಡ್ಯಾಂ, ಹಳ್ಳ-ನಾಲೆಗಳ ಪುನಶ್ಚೇತನ, ಅಂತರ್ಜಲ ಮರುಪೂರಣ ಹಾಗೂ ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಎರಡು ಇಲಾಖೆಗಳು ತಲಾ 100 ಕೋಟಿ ರೂಪಾಯಿ ಅನುದಾನ ಒದಗಿಸಿವೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆನೀರು ಸಂರಕ್ಷಣೆ, ಅಂತರ್ಜಲ ಮಟ್ಟ ವೃದ್ಧಿ ಹಾಗೂ ಜಲಸಂಪನ್ಮೂಲಗಳ ಸಮರ್ಪಕ ನಿರ್ವಹಣೆಗೆ ಶಿರಪುರ ಮಾದರಿಯಲ್ಲಿ ಒಟ್ಟು 200 ಕೋಟಿ ರೂಪಾಯಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಸರಣಿ ಚೆಕ್‌ಡ್ಯಾಂಗಳ ನಿರ್ಮಾಣ, ಹಳ್ಳ-ನಾಲೆಗಳ ಆಳ ಮತ್ತು ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ಸ್ಥಾಪನೆ ಹಾಗೂ ಕೆರೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಶಿರಪುರ ಮಾದರಿಯಲ್ಲಿ ಮಳೆನೀರು ಸಂರಕ್ಷಣೆ :  ಮಳೆಗಾಲದಲ್ಲಿ ಹರಿದುಹೋಗುವ ನೀರನ್ನು ಸಾಧ್ಯವಾದಷ್ಟು ಸ್ಥಳೀಯವಾಗಿಯೇ ತಡೆದು ಸಂಗ್ರಹಿಸುವುದು ಹಾಗೂ ಭೂಮಿಯಲ್ಲಿ ಇಂಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹೆಚ್ಚಲಿದೆ.

ಅಂತರ್ಜಲ ಮಟ್ಟ ಸುಧಾರಿಸುವುದರಿಂದ ಕೊಳವೆಬಾವಿಗಳ ಮೇಲಿನ ಅವಲಂಬನೆ ಕಡಿಮೆಯಾಗುವ ನಿರೀಕ್ಷೆಯಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ದೀರ್ಘಕಾಲೀನ ಜಲಭದ್ರತೆ ಕಲ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಎರಡು ಇಲಾಖೆಯಿಂದ ತಲಾ ₹100 ಕೋಟಿ ಅನುದಾನ : ಈ ಯೋಜನೆಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ತಲಾ 100 ಕೋಟಿ ರೂಪಾಯಿ ಅನುದಾನ ಒದಗಿಸಿವೆ. ಒಟ್ಟು 200 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸಲಿದೆ.

ಮಳೆನೀರು ಸಂಗ್ರಹ, ಕೆರೆಗಳ ಪುನಶ್ಚೇತನ ಹಾಗೂ ಅಂತರ್ಜಲ ಮರುಪೂರಣಕ್ಕೆ ಒತ್ತು ನೀಡಿರುವ ಈ ಯೋಜನೆ ಕಲ್ಯಾಣ ಕರ್ನಾಟಕದ ಕೃಷಿ ಮತ್ತು ಗ್ರಾಮೀಣ ಜಲಭದ್ರತೆಗೆ ಮಹತ್ವದ ಹೆಜ್ಜೆಯಾಗುವ ನಿರೀಕ್ಷೆಯಿದೆ.

The Karnataka government has undertaken water conservation works worth ₹200 crore in the Kalyana Karnataka region under the Shirpur model. The initiative covers Kalaburagi, Bidar, Yadgir, Raichur, Koppal, Ballari and Vijayanagara districts.

The works include construction of series check dams, rejuvenation and deepening of streams and drains, groundwater recharge structures and development of lakes and tanks.

The project aims to conserve rainwater, improve groundwater levels, strengthen irrigation facilities and reduce dependence on borewells. The Small Irrigation and Groundwater Development Department and Kalyana Karnataka Region Development Board have each allocated ₹100 crore. The Small Irrigation Department will implement the project.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-11-2026 | ನ.29ರಿಂದ ಉತ್ತರ ಒಳನಾಡಿನಲ್ಲಿ ಒಣ ಹವೆ ಸಾಧ್ಯತೆ ? ಮುಂದಿನ ಹವಾಮಾನ ಬೆಳವಣಿಗೆ ಏನು?
November 27, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕಳ್ಳಸಾಗಣೆ – ಈಶಾನ್ಯ ಭಾರತದ ರಾಷ್ಟ್ರೀಯ ಭದ್ರತೆಗೂ ಸವಾಲು – ದೇಶದ ಅಡಿಕೆ ಬೆಳೆಗಾರರ ಹಿತಾಸಕ್ತಿಗೂ ಆತಂಕ
November 27, 2026
11:08 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-11-2026 | ಡಿಸೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಸಾಧ್ಯತೆ?
November 26, 2026
9:10 PM
by: ಸಾಯಿಶೇಖರ್ ಕರಿಕಳ
ನಂದಿನಿ ಮೊಸರಿನ ದರ ಇಳಿಕೆ – ನ.29ರಿಂದ ಹೊಸ ಬೆಲೆ ಜಾರಿ; ಲೀಟರ್‌ಗೆ ₹2 ಕಡಿತ!
November 26, 2026
9:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror