ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಅಲ್ಲದೇ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.
ಕಾಮೇಗೌಡರ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು. ಜೂನ್ 28, 2020ರಂದು ಮೋದಿ ಕಾಮೇಗೌಡರನ್ನ ಕೊಂಡಾಡಿದ್ದರು. ‘ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದ ರೈತ 80 ವರ್ಷದ ಕಾಮೇಗೌಡರ ಕೆಲಸ ಎಲ್ಲರಿಗೂ ಅಚ್ಚರಿ ತರುತ್ತದೆ.
ಅವರು ತಮ್ಮ ಕುರಿಸಾಗಣಿಕೆ ಜೊತೆಗೆ ಜಿಲ್ಲೆಯಲ್ಲಿ ಸುಮಾರು 16 ಕೆರೆಗಳನ್ನು ನಿರ್ಮಿಸಿ ಜಲಸಂಕ್ಷಣೆಯಲ್ಲಿ ತೊಡಗಿದ್ದಾರೆ. ಅವರ ಪ್ರಯತ್ನ ಬಹಳ ದೊಡ್ಡದು’ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಕಾಮೇಗೌಡರಿಗೆ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಂದಿವೆ.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…