ಕಮಿಲದಲ್ಲಿ ಬಾಂಧವ್ಯ ಗೆಳೆಯರ ಬಳಗದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

September 11, 2023
10:16 AM
ಕಮಿಲದ ಬಾಂಧವ್ಯ ಗೆಳೆಯರ ಬಳಗದ  ವತಿಯಿಂದ ಕಮಿಲ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಾರ್ಯಕ್ರಮ ನಡೆಸಲಾಯಿತು.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗದ  ವತಿಯಿಂದ ಕಮಿಲ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಡಾ.ರಾಮಕೃಷ್ಣ ಭಟ್‌ ದೇವಸ್ಯ ಉದ್ಘಾಟಿಸಿದರು. ತಾಪಂ ಮಾಜಿ ಸದಸ್ಯ ಅಶೋಕ್‌ ನೆಕ್ರಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿನೋದ್‌ ಕುಮಾರ್‌ ಉಪಸ್ಥಿತರಿದ್ದರು.  ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಫರ್ಧೆ ನಡೆಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್‌ ಧಾರ್ಮಿಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಬ್ಯಾಂಕ್‌ ಅಧ್ಯಕ್ಷ ವೆಂಕಟ್‌ ದಂಬೆಕೋಡಿ, ಗ್ರಾಪಂ ಸದಸ್ಯೆ ಲತಾ ಆಜಡ್ಕ, ಶಾಲಾಮುಖ್ಯೋಪಾಧ್ಯಾಯಿನಿ ವನಜಾಕ್ಷಿ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ತುಂಗನಾಥ ಕಾಯನಕೋಡಿ ಸಭಾಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಾಂಧವ್ಯ ಗೆಳೆಯರ ಬಳಗದ ಕಾರ್ಯದರ್ಶಿ ಲೋಕೇಶ ಕಮಿಲ ಸ್ವಾಗತಿಸಿದರು, ಉಪಾಧ್ಯಕ್ಷ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ತೇಜಪ್ಪ ಮಾಸ್ತರ್‌ ಸಂಪ್ಯಾಡಿ ಹಾಗೂ ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror