ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಡಾ.ರಾಮಕೃಷ್ಣ ಭಟ್ ದೇವಸ್ಯ ಉದ್ಘಾಟಿಸಿದರು. ತಾಪಂ ಮಾಜಿ ಸದಸ್ಯ ಅಶೋಕ್ ನೆಕ್ರಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಫರ್ಧೆ ನಡೆಯಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಧಾರ್ಮಿಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಬ್ಯಾಂಕ್ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾಪಂ ಸದಸ್ಯೆ ಲತಾ ಆಜಡ್ಕ, ಶಾಲಾಮುಖ್ಯೋಪಾಧ್ಯಾಯಿನಿ ವನಜಾಕ್ಷಿ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ತುಂಗನಾಥ ಕಾಯನಕೋಡಿ ಸಭಾಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಾಂಧವ್ಯ ಗೆಳೆಯರ ಬಳಗದ ಕಾರ್ಯದರ್ಶಿ ಲೋಕೇಶ ಕಮಿಲ ಸ್ವಾಗತಿಸಿದರು, ಉಪಾಧ್ಯಕ್ಷ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ತೇಜಪ್ಪ ಮಾಸ್ತರ್ ಸಂಪ್ಯಾಡಿ ಹಾಗೂ ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮ ನಿರ್ವಹಿಸಿದರು.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…