ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ |

October 21, 2020
2:39 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್‌ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ  ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.

ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್‌ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್‌ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್‌ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ  ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್‌ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.

 

ಗೌರವಾರ್ಪಣೆ
ಇದೇ ಸಂದರ್ಭ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

 

ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ  ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror