ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.
ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…