ಮೊಗ್ರ ಸೇತುವೆ – ಕಮಿಲ ರಸ್ತೆ ಸಮಸ್ಯೆ  | ಕಮಿಲ ನಾಗರಿಕರಿಂದ ಪ್ರಧಾನಿಗಳಿಗೆ ವಿಡಿಯೋ ಸಿಡಿ ರವಾನೆ

November 10, 2020
11:58 AM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಮಂಗಳವಾರ ಕಳುಹಿಸಿದ್ದಾರೆ.

ಇಂದು ಆಧುನಿಕ ಮಾಧ್ಯಮಗಳಿದ್ದರೂ ಅಂಚೆ ಕಚೇರಿ ಮೂಲಕವೇ ಸಮಸ್ಯೆಗಳನ್ನು ಹೊತ್ತ ವಿಡಿಯೋ ಸಿಡಿಯನ್ನು ಗ್ರಾಮೀಣ ಭಾಗದ ಅಂಚೆ ಕಚೇರಿ ಮೂಲಕವೇ ರವಾನೆಯ ಉದ್ದೇಶದ ಹಿಂದೆ ಗ್ರಾಮೀಣ ಭಾಗದ ಅಂಚೆ ಕಚೇರಿಯನ್ನು ಸರ್ಕಾರಗಳು ಬಲವರ್ಧನೆ ಮಾಡಬೇಕು ಎಂಬ ಕಾಳಜಿಯೂ ಇದೆ. ಗ್ರಾಮೀಣ ಭಾಗದ ಬಹುಪಾಲು ಮಂದಿ ಅಂಚೆ ಕಚೇರಿ ಬಳಕೆ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಬ್ಯಾಂಕಿಂಗ್‌ ವ್ಯವಸ್ಥೆ ಕೂಡಾ ಅಂಚೆ ಕಚೇರಿಯೇ ಆಗಿದೆ. ಹೀಗಾಗಿ ಆಧುನಿಕ ವ್ಯವಸ್ಥೆಗಳು ಇದ್ದರೂ ಗ್ರಾಮೀಣ ಭಾಗದ ಅಂಚೆ ಕಚೇರಿ ಬಳಕೆಯಾಗುವಂತೆ ಮಾಡಲು ಸಾಮೂಹಿಕ ಸಿಡಿ ರವಾನೆಯ ಉದ್ದೇಶವನ್ನು ನಾಗರಿಕ ಹೋರಾಟ ಕ್ರಿಯಾ ಸಮಿತಿ ಹೊಂದಿದೆ. ಗ್ರಾಮೀಣ ಭಾಗದ ಅಂಚೆ ಕಚೇರಿಗಳು ಇಂದಿಗೂ ನೆಟ್ವರ್ಕ್‌ ಸಮಸ್ಯೆಯನ್ನು ಹೊಂದಿವೆ. ಇಂಟರ್ನೆಟ್‌ ಕೈಕೊಟ್ಟರೆ ಕೆಲಸ ಮಾಡಲಾಗದ ಸ್ಥಿತಿ ಇದೆ.

ವಿಡಿಯೋ ಸಿಡಿ ರವಾನೆಯ ಸಂದರ್ಭ ನಾಗರಿಕ ಹೋರಾಟ ಕ್ರಿಯಾ ಸಮಿತಿ  ಪದಾಧಿಕಾರಿಗಳಾದ ಪಿ ಎಸ್‌ ಗಂಗಾಧರ ಭಟ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಜೀವನ್‌ ಮಲ್ಕಜೆ, ಲಕ್ಷ್ಮೀಶ ಗಬ್ಲಡ್ಕ, ಮಹೇಶ್‌ ಪುಚ್ಚಪ್ಪಾಡಿ, ಹರ್ಷಿತ್‌ ಕಾಂತಿಲ, ಬಾಬು ಕಮಿಲ,  ಸುರೇಶ್‌ ಮೊಗ್ರ , ವಿಶ್ವನಾಥ ಕೇಂಬ್ರೋಳಿ ಮೊದಲಾದವರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror