ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ ಸರ್ಕಾರದ “ಕೂಸಿನ ಮನೆ” ಯೋಜನೆ, ಇದರಿಂದ ಗ್ರಾಮೀಣ ಉದ್ಯೋಗಿ ಮಹಿಳೆಯರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಕೂಸಿನ ಮನೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ದೇವನಹಳ್ಳಿ ತಾಲೂಕಿನಲ್ಲಿ 18 ದೊಡ್ಡ ಬಳ್ಳಾಪುರದಲ್ಲಿ 22, ಹೊಸಕೋಟೆ 22 ಮತ್ತು ನೆಲಮಂಗಲದಲ್ಲಿ 12 ಕೂಸಿನ ಮನೆಗಳು ಚಟುವಟಿಕೆಯಲ್ಲಿವೆ. ಕೂಸಿನ ಮನೆಯಿಂದ ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

