ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವು ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್‌ಡಿಪಿಐ ಸವಣೂರು ಬ್ಲಾಕ್ ಅಧ್ಯಕ್ಷರಾದ ಯೂಸುಫ್ ಹಾಜಿ ಬೇರಿಕೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಶನಿವಾರ ರಾತ್ರಿ 12 ಗಂಟೆಯ ಸಮಯದಲ್ಲಿ ವಿಟ್ಲ ಮೂಲದ ಮಾರುತಿ ಕಾರೊಂದು ಅತೀ ವೇಗದ ಚಾಲನೆಯಿಂದ ಬೈತಡ್ಕ ಮಸೀದಿ ಸಮೀಪದ ಹೊಳೆಗೆ ಬಿದ್ದಿರುವುದು ಸಿಸಿ ಕ್ಯಾಮಾರ ಮೂಲಕ ತಿಳಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಶಯಗಳು ಸಾರ್ವಜನಿಕರಲ್ಲಿ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕಾರಿನಲ್ಲಿದ್ದ ಧನುಷ್ ತನ್ನ ಮನೆಯವರಿಗೆ ಕರೆ ಮಾಡಿ ತಾವೂ ಆಲಂಕಾರಿನಲ್ಲಿದ್ದೇವೆಂದು, ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿರುವುದಾಗಿ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಸವಣೂರು ಚೆಕ್ ಪೋಸ್ಟ್ ನಲ್ಲಿ ಪೋಲೀಸರೊಂದಿಗೆ ಕೂಡ ಗುತ್ತಿಗಾರಿಗೆ ಹೋಗುವುದೆಂದು ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪಾಗಿ ಕೊಟ್ಟು ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಗುತ್ತಿಗಾರಿಗೆ ಹೋಗುವುದಾದರೆ ಪುತ್ತೂರು-ಜಾಲ್ಸೂರು ಮಾರ್ಗ ಹತ್ತಿರದ ರಸ್ತೆ ಆಗಿರುವಾಗ ಈ ಮಾರ್ಗವಾಗಿ ಬರುವ ಅಗತ್ಯವೇನಿತ್ತು?
ಅದೇ ರೀತಿ ಮನೆಯವರ ಬಳಿ ಅಪಘಾತವಾಗಿದೆ ಎಂದು ಸುಳ್ಳು ಹೇಳಿರುವುದು ಯಾಕೆ? ತಡರಾತ್ರಿಯಲ್ಲಿ ಅಂತಹ ಅನಿವಾರ್ಯ ಕೆಲಸವಾದರೂ ಏನು ? ಅಥವಾ ಬೇರೇನಾದರು ಸಮಾಜಘಾತುಕ ಕೆಲಸಕ್ಕೆ ಬಂದವರೇ? ಇಂತಹ ಹಲವಾರು ಸಂಶಯಗಳು ಜನರೆಡೆಯಲ್ಲಿ ಚರ್ಚೆಯ ವಿಷಯವಾಗಿದೆ. ಹಾಗಾಗಿ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಆಗ್ರಹಿಸಿದ್ದಾರೆ. ಹಾಗೂ ನಾಪತ್ತೆಯಾಗಿರುವ ಯುವಕರು ಆದಷ್ಟು ಬೇಗ ಪತ್ತೆಯಾಗಿ ಪ್ರಕರಣವು ಸುಖಾಂತ್ಯವಾಗಲಿ ಎಂದು ಹೇಳಿದ್ದಾರೆ.
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…