ಕಾಣಿಯೂರು | ಕಾರು ಅಪಘಾತ ಪ್ರಕರಣ | ಇನ್ನೊಂದು ಮೃತದೇಹವೂ ಪತ್ತೆ ?

July 12, 2022
10:32 AM

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್‌ ದೂರದಲ್ಲಿ  ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್‌ ಹಾಗೂ ಕನ್ಯಾನ – ಮಂಜೇಶ್ವರದ  ಧನುಷ್‌ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror