ಕಾಣಿಯೂರು | ಜವುಳಿ ವ್ಯಾಪಾರಸ್ಥರ ಮೇಲೆ ಹಲ್ಲೆ – ದೂರು ದಾಖಲು |

October 22, 2022
4:36 PM

ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದುಷ್ಕರ್ಮಿಗಳು ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ.

Advertisement
Advertisement

ಎಫ್‌ಐಆರ್ ನಲ್ಲಿ ಹಲ್ಲೆ ಮಾಡಿದರ ಹೆಸರು ನಮೂದಿಸಿಲ್ಲ. ಆದರೆ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಅಡ್ಡೂರು ಗ್ರಾಮದ ಹೊಳೆ ಬದಿ ನಿವಾಸಿ ರಮೀಝುದ್ದೀನ್ (29) ನೀಡಿದ ದೂರಿನನ್ವಯ ಎಫ್ ಐಆರ್ ದಾಖಲಾಗಿದೆ. ದೂರುದಾರ ರಮೀಝುದ್ದಿನ್ ಅವರು ತಮ್ಮ ಸಂಬಂಧಿಕ ಮುಹಮ್ಮದ್ ರಫೀಕ್ ಅವರೊಂದಿಗೆ ಬೆಡ್ ಶೀಟ್ ಮಾರಾಟಕ್ಕೆಂದು ಅ.20ರಂದು ಕಡಬ ತಾಲೂಕು ಎಡಮಂಗಲ ಹಾಗೂ ದೋಲ್ಪಾಡಿ ಗ್ರಾಮ ಪರಿಸರಕ್ಕೆ ಕಾರಿನಲ್ಲಿ ಹೋಗಿದ್ದಾರೆ. ಗ್ರಾಮದ ಮನೆಯೊಂದರದಲ್ಲಿದ್ದ ಮಹಿಳೆಯ ಜೊತೆ ಬೆಡ್ ಶೀಟ್ ಮಾರಾಟದ ವಿಚಾರದಲ್ಲಿ ತಕರಾರು ಉಂಟಾಗಿ ಅಲ್ಲಿಂದ ವಾಪಸ್ಸು ಕಾಣಿಯೂರು ಕಡೆಗೆ ತೆರಳಿದ್ದಾರೆ.

ಕಾಣಿಯೂರು ಗ್ರಾಮದ ಬೆದ್ರಾಜೆ ಎಂಬಲ್ಲಿಗೆ ಮಧ್ಯಾಹ್ನ 2 ಗಂಟೆಗೆ ತಲುಪಿದಾಗ ಅಲ್ಲಿ ಗುಂಪು ಸೇರಿದವರು ಪಿಕಪ್ ವಾಹನವೊಂದನ್ನು ರಸ್ತೆಗೆ ಅಡ್ಡವಾಗಿ ಇಟ್ಟು ಜವಳಿ ವ್ಯಾಪಾರಿಗಳು ಚಲಾಯಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ಅವರಿಬ್ಬರನ್ನೂ ಕಾರಿನಿಂದ ರಸ್ತೆಗೆ ಬೀಳಿಸಿ ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು ರಸ್ತೆಯಲ್ಲಿ ಎಳೆದಾಡಿ, ತರಚಿದ, ಗುದ್ದಿದ, ರಕ್ತ ಹೆಪ್ಪುಗಟ್ಟಿದ ಹಾಗು ರಕ್ತಗಾಯಗಳು ಉಂಟು ಮಾಡಿದ ಗುಂಪು, ಕಾರನ್ನು ಹುಡಿ ಮಾಡಿ ಜಖಂ ಗೊಳಿಸಿ ಸುಮಾರು 1.50.000 ಲಕ್ಷಗಳಷ್ಟು ನಷ್ಟ ಹಾಗೂ ಕಾರಿನಲ್ಲಿದ್ದ ಬೆಡ್ ಶೀಟ್ ಗಳನ್ನೂ ಬಿಸಾಡಿ ರೂ 25,000ನಷ್ಟವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ನಡುವೆ ಹಲ್ಲೆ ನಡೆಸಿದವರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕ ಹಾಗೂ ಕಾಂಗ್ರೆಸ್‌ ಮುಖಂಡರು ಸ್ಥಳೀಯ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ತಂಡ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
May 29, 2025
7:12 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group