ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದುಷ್ಕರ್ಮಿಗಳು ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ.
ಎಫ್‌ಐಆರ್ ನಲ್ಲಿ ಹಲ್ಲೆ ಮಾಡಿದರ ಹೆಸರು ನಮೂದಿಸಿಲ್ಲ. ಆದರೆ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಅಡ್ಡೂರು ಗ್ರಾಮದ ಹೊಳೆ ಬದಿ ನಿವಾಸಿ ರಮೀಝುದ್ದೀನ್ (29) ನೀಡಿದ ದೂರಿನನ್ವಯ ಎಫ್ ಐಆರ್ ದಾಖಲಾಗಿದೆ. ದೂರುದಾರ ರಮೀಝುದ್ದಿನ್ ಅವರು ತಮ್ಮ ಸಂಬಂಧಿಕ ಮುಹಮ್ಮದ್ ರಫೀಕ್ ಅವರೊಂದಿಗೆ ಬೆಡ್ ಶೀಟ್ ಮಾರಾಟಕ್ಕೆಂದು ಅ.20ರಂದು ಕಡಬ ತಾಲೂಕು ಎಡಮಂಗಲ ಹಾಗೂ ದೋಲ್ಪಾಡಿ ಗ್ರಾಮ ಪರಿಸರಕ್ಕೆ ಕಾರಿನಲ್ಲಿ ಹೋಗಿದ್ದಾರೆ. ಗ್ರಾಮದ ಮನೆಯೊಂದರದಲ್ಲಿದ್ದ ಮಹಿಳೆಯ ಜೊತೆ ಬೆಡ್ ಶೀಟ್ ಮಾರಾಟದ ವಿಚಾರದಲ್ಲಿ ತಕರಾರು ಉಂಟಾಗಿ ಅಲ್ಲಿಂದ ವಾಪಸ್ಸು ಕಾಣಿಯೂರು ಕಡೆಗೆ ತೆರಳಿದ್ದಾರೆ.
ಕಾಣಿಯೂರು ಗ್ರಾಮದ ಬೆದ್ರಾಜೆ ಎಂಬಲ್ಲಿಗೆ ಮಧ್ಯಾಹ್ನ 2 ಗಂಟೆಗೆ ತಲುಪಿದಾಗ ಅಲ್ಲಿ ಗುಂಪು ಸೇರಿದವರು ಪಿಕಪ್ ವಾಹನವೊಂದನ್ನು ರಸ್ತೆಗೆ ಅಡ್ಡವಾಗಿ ಇಟ್ಟು ಜವಳಿ ವ್ಯಾಪಾರಿಗಳು ಚಲಾಯಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ಅವರಿಬ್ಬರನ್ನೂ ಕಾರಿನಿಂದ ರಸ್ತೆಗೆ ಬೀಳಿಸಿ ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು ರಸ್ತೆಯಲ್ಲಿ ಎಳೆದಾಡಿ, ತರಚಿದ, ಗುದ್ದಿದ, ರಕ್ತ ಹೆಪ್ಪುಗಟ್ಟಿದ ಹಾಗು ರಕ್ತಗಾಯಗಳು ಉಂಟು ಮಾಡಿದ ಗುಂಪು, ಕಾರನ್ನು ಹುಡಿ ಮಾಡಿ ಜಖಂ ಗೊಳಿಸಿ ಸುಮಾರು 1.50.000 ಲಕ್ಷಗಳಷ್ಟು ನಷ್ಟ ಹಾಗೂ ಕಾರಿನಲ್ಲಿದ್ದ ಬೆಡ್ ಶೀಟ್ ಗಳನ್ನೂ ಬಿಸಾಡಿ ರೂ 25,000ನಷ್ಟವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ನಡುವೆ ಹಲ್ಲೆ ನಡೆಸಿದವರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಹಾಗೂ ಕಾಂಗ್ರೆಸ್ ಮುಖಂಡರು ಸ್ಥಳೀಯ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ತಂಡ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…