ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ವಿಸ್ತಾರ ಅಗತ್ಯ

March 1, 2026
7:51 AM

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯುತ್ತಿರುವ ‘ಕಿಸಾನ್ ಸ್ವರಾಜ್ ಸಮ್ಮೇಳನ’ದಲ್ಲಿ ಬೆಂಗಳೂರಿನ ನದಿ ಪ್ರಕಾಶನ ಪ್ರಕಟಿಸಿರುವ ಡಾ. ಗಣೇಶ ಹೆಗಡೆ ನೀಲೇಸರ ಅವರ ‘ಮರ ಮೇವು’ ಹಾಗೂ ಕೇಶವ ಎಚ್. ಕೊರ್ಸೆ ಅವರ ‘ನೆಲ ಮುಗಿಲ ಮಾತು’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ವಿಜ್ಞಾನಿ ಎನ್. ದೇವಕುಮಾರ್, ಕೃಷಿ ಕ್ಷೇತ್ರದಲ್ಲಿ ಕನ್ನಡ ಭಾಷೆಯಲ್ಲಿನ ವಿಜ್ಞಾನ ಸಾಹಿತ್ಯದ ಅಗತ್ಯತೆಯನ್ನು ಒತ್ತಿಹೇಳಿದರು. ರೈತರಲ್ಲಿ ಕೃಷಿ ಜ್ಞಾನ ಹೆಚ್ಚಿಸಲು ಹಾಗೂ ವೈಜ್ಞಾನಿಕ ಮಾಹಿತಿ ಗ್ರಾಮೀಣ ಮಟ್ಟಕ್ಕೆ ತಲುಪಿಸಲು ಸ್ಥಳೀಯ ಭಾಷೆಯ ಪುಸ್ತಕಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ ಎಂದು ಹೇಳಿದರು.

‘ಮರ-ಮೇವು’ ಕೃತಿಯಲ್ಲಿ ಪಶುಗಳಿಗೆ ಮೇವು ಒದಗಿಸುವ ವಿವಿಧ ಮರಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಲಾಗಿದೆ. ಈ ಕೃತಿ ಪಶುವೈದ್ಯಕೀಯ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತಲುಪಬೇಕು ಎಂದು ದೇವಕುಮಾರ್ ಅಭಿಪ್ರಾಯಪಟ್ಟರು.

ಕೃತಿಯ ಲೇಖಕ ಡಾ. ಗಣೇಶ ಹೆಗಡೆ ನೀಲೇಸರ ಮಾತನಾಡಿ, “ಈ ಪುಸ್ತಕದಲ್ಲಿ ಒಟ್ಟು 59 ಮೇವಿನ ಮರಗಳ ಕುರಿತು ವೈಜ್ಞಾನಿಕ ಹಾಗೂ ಪ್ರಾಯೋಗಿಕ ಮಾಹಿತಿಯನ್ನು ಒಳಗೊಂಡಿದೆ. ರೈತರು ಹಾಗೂ ವಿದ್ಯಾರ್ಥಿಗಳಿಗೆ ಇದು ಉಪಯುಕ್ತ ಮಾರ್ಗದರ್ಶಿಯಾಗಲಿದೆ” ಎಂದು ಹೇಳಿದರು.

ಕೃಷಿ ಹಾಗೂ ಪಶುಸಂಗೋಪನೆ ಕ್ಷೇತ್ರದಲ್ಲಿ ವೈಜ್ಞಾನಿಕ ಮಾಹಿತಿ ಕನ್ನಡದಲ್ಲೇ ಲಭ್ಯವಾಗುವುದು ರೈತರ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಶಾಶ್ವತ ಕೃಷಿಗೆ ಸಹಕಾರಿಯಾಗಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

Agricultural scientist N. Devkumar emphasized the need to expand agricultural science literature in Kannada to ensure scientific knowledge reaches farmers effectively. He spoke at the Kisan Swaraj Sammelan in Mysuru during the release of the books Mara Mevu and Nela Mugila Mathu, highlighting their value for farmers and veterinary students.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror