ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಾಧಿಕಾರದ ಮುಖ್ಯ ಕೆಲಸ ಸರ್ಕಾರವು ಕನ್ನಡಪರ ತೀರ್ಮಾನಗಳನ್ನು ತೆಗೆದುಕೊಂಡರೆ, ಅಂತಹ ತೀರ್ಮಾನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು. ಈ ನಿಟ್ಟಿನಲ್ಲಿ ಸರ್ಕಾರವು 3000 ಕ್ಕೂ ಹೆಚ್ಚಿನ ಆದೇಶಗಳನ್ನು ಹೊರಡಿಸಿದೆ. ಗಡಿಪ್ರದೇಶದ ಶಾಲೆಗಳು ಹೆಚ್ಚಾಗಿ ಕನ್ನಡೀಕರಣ ಗೊಳಿಸಬೇಕು ಮತ್ತು ಹೊರಗಿನಿಂದ ಬರುವವರನ್ನು ಕನ್ನಡಿಗರೊಂದಿಗೆ ವ್ಯವಹಾರ ಮಾಡುವಾಗ ಅವರನ್ನು ಕನ್ನಡದಲ್ಲಿಯೇ ಮಾತನಾಡಿ ಅವರಿಗೆ ಕನ್ನಡ ಭಾಷೆಯನ್ನು ಕಲಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೀದರ್, ಗುಲ್ಬರ್ಗ, ರಾಯಚೂರು, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು. 80 ರ ದಶಕದಿಂದಲೂ ಕನ್ನಡ ಅನುಷ್ಠಾನಕ್ಕೆ ಸಂಬಂದಿಸಿದಂತೆ ಕನ್ನಡಪರ ಸಂಘಟನೆಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.