ನ.1 | ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ | ರಾಜ್ ಕುಟುಂಬಕ್ಕೆ ಸರ್ಕಾರದಿಂದ ಆಹ್ವಾನ ಪತ್ರಿಕೆ

October 31, 2022
6:56 PM

ನ.1 ರಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಜ್ಯ ಸರ್ಕಾರದಿಂದ ರಾಜ್ ಕುಟುಂಬಕ್ಕೆ ಪ್ರೀತಿಯ ಆಹ್ವಾನ ನೀಡಲಾಯಿತು.

ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಕಂದಾಯ ಸಚಿವ ಆರ್ ಅಶೋಕ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ನಾಳೆ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಲಿದೆ.ವಿಧಾನಸೌಧದ ಮುಂಭಾಗದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror