ನ.1 ರಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಜ್ಯ ಸರ್ಕಾರದಿಂದ ರಾಜ್ ಕುಟುಂಬಕ್ಕೆ ಪ್ರೀತಿಯ ಆಹ್ವಾನ ನೀಡಲಾಯಿತು.
ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಕಂದಾಯ ಸಚಿವ ಆರ್ ಅಶೋಕ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ನಾಳೆ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಲಿದೆ.ವಿಧಾನಸೌಧದ ಮುಂಭಾಗದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ…
ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು,…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…