ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ

November 1, 2024
6:39 AM
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ. ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಹೀಗೆ ಉದಯವಾದ ಕರುನಾಡಿನಲ್ಲಿ ಇಂದು  ಸ್ವಾಭಿಮಾನದ ಸಂಕೇತವಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನವಾಗಿ ಆಚರಣೆ.

Advertisement

1956ರ ನವೆಂಬರ್ 1 ರಂದು ಮೈಸೂರು ರಾಜ್ಯವು ರಚನೆಯಾಯಿತು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶವನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ಘೋಷಿಸಲಾಗಿತ್ತು. ನಂತರ ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣಕ್ಕೆ ಮನ್ನಣೆ ನೀಡಿದ ಇತರ ವ್ಯಕ್ತಿಗಳಲ್ಲಿ ಸಾಹಿತಿಗಳಾದ ಕೆ. ಶಿವರಾಮ ಕಾರಂತ್, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಸೇರಿದ್ದಾರೆ.

ಕರ್ನಾಟಕವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಮೈಸೂರು ರಾಜ್ಯ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಮದ್ರಾಸ್ ಕರ್ನಾಟಕ. ಈ ಎಲ್ಲ ಭಾಗಗಳಲ್ಲಿ ಕನ್ನಡ ಮಾತನಾಡುವವರಿಗೆ ಮನ್ನಣೆ ಇದೆ.  ಇದೀಗ ಸಂಭ್ರಮದ ದಿನ.

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.  ಸಮಾರಂಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಾಲಾ ಸೀತಾರಾಮನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಬೀದರ್ ಜಿಲ್ಲಾಡಳಿತ ವತಿಯಿಂದ ನಾಳೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ
April 12, 2025
1:50 PM
by: ಸಾಯಿಶೇಖರ್ ಕರಿಕಳ
ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ
April 12, 2025
12:31 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
April 12, 2025
11:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group