ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ. ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಹೀಗೆ ಉದಯವಾದ ಕರುನಾಡಿನಲ್ಲಿ ಇಂದು ಸ್ವಾಭಿಮಾನದ ಸಂಕೇತವಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನವಾಗಿ ಆಚರಣೆ.
1956ರ ನವೆಂಬರ್ 1 ರಂದು ಮೈಸೂರು ರಾಜ್ಯವು ರಚನೆಯಾಯಿತು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶವನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ಘೋಷಿಸಲಾಗಿತ್ತು. ನಂತರ ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣಕ್ಕೆ ಮನ್ನಣೆ ನೀಡಿದ ಇತರ ವ್ಯಕ್ತಿಗಳಲ್ಲಿ ಸಾಹಿತಿಗಳಾದ ಕೆ. ಶಿವರಾಮ ಕಾರಂತ್, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಸೇರಿದ್ದಾರೆ.
ಕರ್ನಾಟಕವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಮೈಸೂರು ರಾಜ್ಯ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಮದ್ರಾಸ್ ಕರ್ನಾಟಕ. ಈ ಎಲ್ಲ ಭಾಗಗಳಲ್ಲಿ ಕನ್ನಡ ಮಾತನಾಡುವವರಿಗೆ ಮನ್ನಣೆ ಇದೆ. ಇದೀಗ ಸಂಭ್ರಮದ ದಿನ.
ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಾಲಾ ಸೀತಾರಾಮನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಬೀದರ್ ಜಿಲ್ಲಾಡಳಿತ ವತಿಯಿಂದ ನಾಳೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…