ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ದ.ಕ ಅಪರ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ತಿಳಿಸಿದರು.
ಅವರು ಅ.16ರಂದು ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದರು. ನವೆಂಬರ್ 1 ರಂದು ನಗರದ ನೆಹರು ಮೈದಾನದಲ್ಲಿ ಬೆಳಿಗ್ಗೆ 8.45 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಹಾಗೂ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿ ಅನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವರು ಪಥ ಸಂಚಲನ ವೀಕ್ಷಣೆ ಮಾಡುವರು. ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮವನ್ನು ಸುವ್ಯವಸ್ಥೆಯಾಗಿ ನಡೆಸಲು ಉಪಸಮಿತಿಗಳನ್ನು ರಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಜವಾಬ್ದಾರಿಯನ್ನು ನೀಡಲಾಯಿತು.
ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ವೆಂಕಟೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪದ್ರೀಪ್ ಕುಮಾರ್ ಕಲ್ಕೂರ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…