ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.
ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel