ಪುತ್ತೂರು ತಾಲೂಕಿನ 21 ನೇ ತಾಲೂಕು ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರಿಗೆ ಅಭಿನಂದನೆ |

September 27, 2022
2:34 PM
Advertisement

ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.

Advertisement
Advertisement
Advertisement
ಪುತ್ತೂರಿನಲ್ಲಿ ಸೆ.29 ಹಾಗೂ 30 ರಂದು ನಡೆಯಲಿರುವ 21 ನೇಯ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಅವರಿಗೆ ಕಾಲೇಜಿನಲ್ಲಿ ಏರ್ಪಡಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದರು.  ಸಾಹಿತ್ಯ ಸಮ್ಮೇಳನಗಳಲ್ಲಿ ಸರ್ವಾಧ್ಯಕ್ಷತೆಯ ಜವಾಬ್ದಾರಿ ದೊರಕುವುದು ಅತ್ಯಂತ ಗೌರವದ ಸಂಗತಿ.ಇಂದು ಆ ಗೌರವ ನಮ್ಮ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಶ್ರೀಧರ ಎಚ್.ಜಿ ಅವರಿಗೆ ಸಲ್ಲಿರುವುದು ಬಹಳ ಹೆಮೆಯ ವಿಚಾರ. ಅವರ ಪ್ರತಿಯೊಂದು ಬರವಣಿಗೆಯಲ್ಲೂ ಹೊಸತನವಿದೆ. ಸಮಾಜಕ್ಕೆ ಇವರ ಸಾಹಿತ್ಯದ ಕೊಡುಗೆ ಅಪಾರವಾದುದು. ಇವರ ಕೈಯಿಂದ ಸಾಹಿತ್ಯಗಳು ಇನ್ನಷ್ಟು ಮೂಡಿಬರಲಿ ರಾಷ್ಟ್ರ ಮಟ್ಟದಲ್ಲಿ ಮನ್ನಣೆ ಸಿಗಲಿ ಎಂದು ಹಾರೈಸಿದರು.

Advertisement
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಚ್.ಜಿ ಶ್ರೀಧರ, ನಮ್ಮಲ್ಲಿ ಮುಖ್ಯವಾಗಿ ಸಂಶೋಧನ ಮನೋಭಾವವಿರಬೇಕು. ಈ ಹುಡುಕಾಟದ ಮನೋಭಾವವಿರುವುದರಿಂದ ನಾವು ಹೊಸ ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಹೊಸದುದನ್ನು ಹುಡುಕುತ್ತಾ ಹೋದಂತೆ ಅನೇಕ ಸೂಕ್ಷ್ಮವಾದ ವಿಚಾರಗಳು ನಮ್ಮ ಗಮನಕ್ಕೆ ಬರುತ್ತದೆ. ಈ ಎಲ್ಲಾ ವಿಚಾರಗಳು ಸಾಹಿತ್ಯದಲ್ಲಿ ನಮ್ಮನ್ನು ಆಳವಾಗಿ ತೊಡಗಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್  ಶುಭ ಹಾರೈಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಅಭಿನಂದನಾ ನುಡಿಗಳನ್ನಾಡಿದರು.ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.

ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror