ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹೆಮ್ಮೆಯ ಮಹಿಳಾ ಸಾಧಕಿ, ಕನ್ನಡತಿ ಸುಧಾಮೂರ್ತಿ

March 8, 2024
5:55 PM

ಹೆಮ್ಮೆಯ ಕನ್ನಡತಿ ಇನ್ಫೋಸಿಸ್‌ ಫೌಂಡೇಶನ್‌(Infosis Foudation) ಅಧ್ಯಕ್ಷೆ ಸುಧಾಮೂರ್ತಿ (Sudha Murthy)ಅವರನ್ನು ಮಹಿಳಾ ದಿನಾಚರಣೆಯಂದೇ (Women’s Day)  ಕೇಂದ್ರ ಸರ್ಕಾರ(Central govt)  ರಾಜ್ಯಸಭೆಗೆ(Rajya sabha) ನಾಮನಿರ್ದೇಶನ ಮಾಡಿದೆ.  ಸಮಾಜ ಸೇವೆ(Social work) ಮತ್ತು ಶಿಕ್ಷಣಕ್ಕೆ(Education) ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಮೋದಿ ಪೋಸ್ಟ್‌ನಲ್ಲಿ ಏನಿದೆ? : ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.

Advertisement

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror