ಹೆಮ್ಮೆಯ ಕನ್ನಡತಿ ಇನ್ಫೋಸಿಸ್ ಫೌಂಡೇಶನ್(Infosis Foudation) ಅಧ್ಯಕ್ಷೆ ಸುಧಾಮೂರ್ತಿ (Sudha Murthy)ಅವರನ್ನು ಮಹಿಳಾ ದಿನಾಚರಣೆಯಂದೇ (Women’s Day) ಕೇಂದ್ರ ಸರ್ಕಾರ(Central govt) ರಾಜ್ಯಸಭೆಗೆ(Rajya sabha) ನಾಮನಿರ್ದೇಶನ ಮಾಡಿದೆ. ಸಮಾಜ ಸೇವೆ(Social work) ಮತ್ತು ಶಿಕ್ಷಣಕ್ಕೆ(Education) ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.
ಮೋದಿ ಪೋಸ್ಟ್‌ನಲ್ಲಿ ಏನಿದೆ? : ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.
ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.
– ಅಂತರ್ಜಾಲ ಮಾಹಿತಿ
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…