ಕಾಂತಾರ ಚಲನಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ರಿಷಬ್ ಶೆಟ್ಟಿ, ಸಿನಿಮಾ ತಯಾರಿ ಮೊದಲೆ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದ ರಿಷಬ್ ಶೆಟ್ಟಿ ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.#ಕಾಂತಾರಾ ಚಲನಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. #Kantara film director #RishabhShetty visited Dharmasthala.#KantaraMovie #RishabhShetty @KantaraFilm pic.twitter.com/QKoSWnYMMa
— theruralmirror (@ruralmirror) November 2, 2022
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel