ಕಾಂತಾರ ನಿರ್ದೇಶಕ ರಿಷಬ್‌ ಶೆಟ್ಟಿ ದಂಪತಿ ಧರ್ಮಸ್ಥಳಕ್ಕೆ ಭೇಟಿ |

November 2, 2022
6:18 PM

ಕಾಂತಾರ ಚಲನಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾದರು.

ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ರಿಷಬ್‌ ಶೆಟ್ಟಿ, ಸಿನಿಮಾ ತಯಾರಿ ಮೊದಲೆ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದ ರಿಷಬ್ ಶೆಟ್ಟಿ ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ರಿಷಬ್‌ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror