ಕಾಂತಾರ ಚಲನಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾದರು.
ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…