ಕಾಂತಾರ ಸಿನಿಮಾ | ವಿವಾದ ಸೃಷ್ಟಿಸಿದ ನಟ ಚೇತನ್

Advertisement
Advertisement

ಕರ್ನಾಟಕ ರಾಜ್ಯ ಅಲ್ಲದೇ ದೇಶ ವಿದೇಶದಲ್ಲೂ ಭರ್ಜರಿ ಸದ್ದು ಮಾಡುತ್ತಿರುವ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಟ್ವೀಟ್ ಮಾಡಿದ್ದು ಭಾರೀ ವಿವಾದವನ್ನು ಸೃಷ್ಟಿಸಿದೆ.

Advertisement

ಕಾಂತಾರ ಚಿತ್ರದ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ ಎಂದು ಟ್ವೀಟ್ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

Advertisement
Advertisement

ತಮ್ಮ ಟ್ವೀಟ್‍ನಲ್ಲಿ ಚೇತನ್ ಅವರು, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.ಇದು ನಿಜವಲ್ಲ.

ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‍ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

Advertisement
Advertisement

ಆದರೆ ಚೇತನ್ ಅವರ ಈ ಟ್ವೀಟ್‍ಗೆ ನೆಟ್ಟಿಗರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನೇಕರು ಪ್ರತಿಕ್ರಿಯೆ ನೀಡಿದ್ದು, ಒಂದು ಚಿತ್ರಕ್ಕೆ ಜಾತಿ, ಧರ್ಮ ಲೋಪ ಮಾಡುವುದು ಚೇತನ್‍ನಂತವರಿಗೆ ಮಾತ್ರ ಬರುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಕಾಂತಾರ ಸಿನಿಮಾ | ವಿವಾದ ಸೃಷ್ಟಿಸಿದ ನಟ ಚೇತನ್"

Leave a comment

Your email address will not be published.


*