ಕರ್ನಾಟಕ ರಾಜ್ಯ ಅಲ್ಲದೇ ದೇಶ ವಿದೇಶದಲ್ಲೂ ಭರ್ಜರಿ ಸದ್ದು ಮಾಡುತ್ತಿರುವ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಟ್ವೀಟ್ ಮಾಡಿದ್ದು ಭಾರೀ ವಿವಾದವನ್ನು ಸೃಷ್ಟಿಸಿದೆ.
ಕಾಂತಾರ ಚಿತ್ರದ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ ಎಂದು ಟ್ವೀಟ್ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ತಮ್ಮ ಟ್ವೀಟ್‍ನಲ್ಲಿ ಚೇತನ್ ಅವರು, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.ಇದು ನಿಜವಲ್ಲ.
ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‍ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಆದರೆ ಚೇತನ್ ಅವರ ಈ ಟ್ವೀಟ್‍ಗೆ ನೆಟ್ಟಿಗರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನೇಕರು ಪ್ರತಿಕ್ರಿಯೆ ನೀಡಿದ್ದು, ಒಂದು ಚಿತ್ರಕ್ಕೆ ಜಾತಿ, ಧರ್ಮ ಲೋಪ ಮಾಡುವುದು ಚೇತನ್‍ನಂತವರಿಗೆ ಮಾತ್ರ ಬರುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…