Advertisement
MIRROR FOCUS

ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ಮನೆಯಲ್ಲಿಯೇ ಆಧಾರ್ ಅಪ್ಡೇಟ್‌ | ಮಾದರಿಯಾದ ಅಂಚೆ ಇಲಾಖೆಯ ಸೇವೆ |

Share

ಕಾರ್ಕಳದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬವೊಂದರ ಮನೆ ಬಾಗಿಲಿಗೆ ತೆರಳಿ ಆಧಾರ್ ನವೀಕರಣ ಸೇವೆಯನ್ನು ಒದಗಿಸಿದ ಕಾರ್ಕಳ ಮತ್ತು ಪುತ್ತೂರು ಅಂಚೆ ವಿಭಾಗದ ಅಂಚೆ ಅಧಿಕಾರಿಗಳು ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾರ್ಕಳದ ಅಂಚೆ ಸಿಬ್ಬಂದಿಯ ಮಾದರಿ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗಿದೆ. ಒಟ್ಟು 317 ಅಶಕ್ತರ ಮನೆ ಬಾಗಿಲಿಗೆ ಹೋಗಿ ಈ  ಸೇವೆ ನೀಡಲಾಗಿದೆ. ಮರ್ಣೆ ಗ್ರಾಮದ ದಿನೇಶ್ ಹಾಗೂ ಉಷಾ ದಂಪತಿಯ 10 ವರ್ಷದ ಮಗಳು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, ಇವರ ಮನೆಗೆ ತೆರಳಿದ ತಂಡ ಆಧಾರ್ ಬಯೋಮೆಟ್ರಿಕ್ ನವೀಕರಣ ಹಾಗೂ ವಿಳಾಸ ತಿದ್ದುಪಡಿ ಮಾಡಿದೆ.ಈ ಜನೋಪಯೋಗಿ ಸೇವೆಗೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಅಂಚೆ ಸಿಬ್ಬಂದಿಯ ಮಾದರಿ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದು, ಅಂಚೆ ಇಲಾಖೆಯ ಅತ್ಯುತ್ತಮ ಸೇವಾ ಯೋಜನೆಗಳು ಮತ್ತಷ್ಟು ಜನರಿಗೆ ತಲುಪವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಕಾರ್ಕಳದ  ದೊಂಬರಪಲ್ಕೆಯ 10 ವರ್ಷದ ಬಾಲಕಿ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದಳು. ಆಕೆಯ ತಾಯಿಯೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಕುಟುಂಬ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಅವರು ತಮ್ಮ ಆಧಾರ್ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸಬೇಕಾಗಿತ್ತು ಹಾಗೂ ಅವರ ವಿಳಾಸವನ್ನು ಸರಿಪಡಿಸಬೇಕಾಗಿತ್ತು ಆದರೆ ಅವರ ಆರೋಗ್ಯ ಸ್ಥಿತಿಯ ಕಾರಣದಿಂದಾಗಿ ಅಂಚೆ ಕಚೇರಿಗೆ ಭೇಟಿ ನೀಡಲು ಸಾಧ್ಯವಾಗಲಿಲ್ಲ.

ಹೀಗಾಗಿ ಕುಟುಂಬವು ಕಾರ್ಕಳ ಪ್ರಧಾನ ಅಂಚೆ ಕಚೇರಿಯನ್ನು ಸಂಪರ್ಕಿಸಿ, ಆಧಾರ್ ನವೀಕರಣಕ್ಕಾಗಿ ಮನೆಯ ಸಹಾಯವನ್ನು ಕೋರಿತ್ತು. ಬಳಿಕ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ತಂಡವು ಯಂತ್ರಗಳೊಂದಿಗೆ ಕುಟುಂಬದ ಮನೆಗೆ ಭೇಟಿ ನೀಡಿ ಅಗತ್ಯ ಬಯೋಮೆಟ್ರಿಕ್ ನವೀಕರಣಗಳು ಮತ್ತು ವಿಳಾಸ ತಿದ್ದುಪಡಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಂಚೆ ಅಧಿಕಾರಿಗಳ ಸೇವೆಯನ್ನು ಶ್ಲಾಘಿಸಿದ್ದಾರೆ.

“Hats off to the postal officials of Karkala and Puttur divisions for going above and beyond in their duties, delivering Aadhaar updates to a sick family’s doorstep. Their dedication and compassion is truly commendable. #PostalService #AadhaarUpdate #Karkala #Puttur”

The postal officials of Karkala and Puttur postal divisions are receiving widespread praise for their exemplary service in providing Aadhaar updates directly to the home of a family in Karkala who are suffering from illness.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

55 minutes ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

8 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

19 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

23 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago