ಬಿಟ್ಟಿಯಾಗಿ ಸಿಗುತ್ತೆ ಅಂದ್ರೆ ಎಲ್ಲರಿಗೂ ಬೇಕು. ಆದರೆ ಬಡವರ ಹೊಟ್ಟೆ ಮೇಲೆ ಹೊಡೆದು ಜನರ ತೆರಿಗೆ ಹಣಕ್ಕೆ ವಂಚನೆ ಮಾಡೋದು ಅಂದ್ರೆ ಅದು ನಿಜಕ್ಕೂ ನಾಚಿಗೇಡಿನ ಸಂಗತಿ. ಈ ರೀತಿ ಮೋಸ ಮಾಡಿ, ಸರ್ಕಾರಕ್ಕೆ ವಂಚಿಸುತ್ತಿರುವುದು ಬೇರಾರು ಅಲ್ಲ ಸರ್ಕಾರಿ ನೌಕರಿಯಲ್ಲಿದ್ದ ನೌಕರರು….!
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…