Advertisement
ಸುದ್ದಿಗಳು

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : 7.10 ಲಕ್ಷ ಮಂದಿ ವಿದ್ಯಾರ್ಥಿಗಳು ನೋಂದಣಿ

Share

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದು ಆರಂಭವಾಗಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಪರೀಕ್ಷೆ ನಡೆಸಲು ರಾಜ್ಯದಾದ್ಯಂತ 1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ವಿವಿಧ ಹಂತದ ಅಧಿಕಾರಿಗಳು ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಲಿದ್ದಾರೆ. ಪರೀಕ್ಷಾ ಕೇಂದ್ರಗಳ ಹೊರಭಾಗದಲ್ಲೂ ಕಟ್ಟುನಿಟ್ಟಿನ ಕಣ್ಣಾವಲು ವ್ಯವಸ್ಥೆ ಕಲ್ಪಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಹಾಗೂ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆಯೂ ಕಡ್ಡಾಯವಾಗಿ ಜಾರಿಯಲ್ಲಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 5,174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಭಾಗವಾರು ವಿವರ ಹೀಗಿದೆ:

  • ವಿಜ್ಞಾನ ವಿಭಾಗ – 2.92 ಲಕ್ಷ ವಿದ್ಯಾರ್ಥಿಗಳು

  • ವಾಣಿಜ್ಯ ವಿಭಾಗ – 2.11 ಲಕ್ಷ ವಿದ್ಯಾರ್ಥಿಗಳು

  • ಕಲಾ ವಿಭಾಗ – 1.42 ಲಕ್ಷ ವಿದ್ಯಾರ್ಥಿಗಳು

ಪರೀಕ್ಷೆಯ ಮೊದಲ ದಿನವಾದ ನಾಳೆ ಕನ್ನಡ ಹಾಗೂ ಅರೇಬಿಕ್ ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 17 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್, ಹೆಲ್ತ್ ಕೇರ್ ಹಾಗೂ ಬ್ಯೂಟಿ ಆ್ಯಂಡ್ ವೆಲ್ನೆಸ್ ವಿಷಯಗಳ ಪರೀಕ್ಷೆಗಳೊಂದಿಗೆ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka 2nd PUC annual examinations will begin tomorrow with 7.10 lakh students registered from 5,174 colleges. Exams will be held at 1,217 centres equipped with CCTV and webcasting monitoring. Strict rules including a ban on mobile phones and a 200-meter prohibited zone around centres have been enforced. The exams will conclude on March 17, according to the School Examination and Assessment Board.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

7 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

9 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

15 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

16 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

17 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

18 hours ago