ಇಂಧನ ಇಲಾಖೆಯಿಂದ ರಾಜ್ಯದಲ್ಲಿ ಮುಂದಿನ 4 ವರ್ಷಗಳಲ್ಲಿ ಒಟ್ಟು 440 ಹೊಸ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವೆಡೆ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಈ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಕಡೂರು ತಾಲೂಕು ಚೌಳಹಿರಿಯೂರು, ಕೆ.ಬಸವನಹಳ್ಳಿಯಲ್ಲಿ ನೂತನ ವಿದ್ಯುತ್ ಉಪ ಕೇಂದ್ರ ಸ್ಥಾಪನೆಗೆ ಆದೇಶ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿನ ಹಾಲಿ ವಿದ್ಯುತ್ ಉಪ ಕೇಂದ್ರಗಳಲ್ಲಿ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಪರಿವರ್ತಕಗಳ ಸಾಮರ್ಥ್ಯ ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




