ಅಡಿಕೆ ಆಮದು ರದ್ದು ಮಾಡಿ | ಗುಣಮಟ್ಟದ ಅಡಿಕೆ ಇರುವಾಗ ಕಳಪೆ ಅಡಿಕೆ ಏಕೆ ? | ರಾಜ್ಯದ ಅಡಿಕೆ-ಕಾಳುಮೆಣಸು ಬೆಳೆಗಾರರನ್ನು ರಕ್ಷಿಸಿ | ಆಮ್‌ ಆದ್ಮಿ ಪಾರ್ಟಿ ಒತ್ತಾಯ |

October 11, 2022
3:59 PM

ಈ ದೇಶದಲ್ಲಿ ಗುಣಮಟ್ಟದ ಅಡಿಕೆ ಇರುವಾಗ ಕಳಪೆ ಗುಣಮಟ್ಟದ ಅಡಿಕೆ ಆಮದು ಏಕೆ ಮಾಡಿಕೊಳ್ಳಬೇಕು?. ಈ ರಾಜ್ಯದಲ್ಲಿ ಸಾಕಷ್ಟು ಅಡಿಕೆ ಬೆಳೆಯಲಾಗುತ್ತದೆ. ಹೀಗಿರುವಾಗ ಅಡಿಕೆ ಆಮದು ಅನಿವಾರ್ಯ ಏಕೆ ?. ಮೊದಲು ಈ ದೇಶದ ಕೃಷಿಕರ ರಕ್ಷಣೆಯಾಗಲಿ, ಆಮದು ನಿಯಮಗಳಿಂದ ಕರ್ನಾಟಕದ ಅಡಿಕೆ ಮತ್ತು ಕಾಳುಮೆಣಸು ಬೆಳಗಾರರಿಗೆ ಸಂಕಷ್ಟ ಎದುರಾಗಲಿದೆ ಎಂದು ಆಮ್‌ ಆದ್ಮಿ ಪಕ್ಷ  ಎಚ್ಚರಿಸಿದೆ.

Advertisement
Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಕ್ಷದ ಮುಖಂಡ ಬ್ರಿಜೇಶ್‌ ಕಾಳಪ್ಪ, ಅಡಿಕೆ, ಕಾಳುಮೆಣಸು ಹಾಗೂ ಶುಂಠಿ ಮೊದಲಾದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ದೇಶದ ಕೃಷಿಕರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ.ರಾಜ್ಯದ ಅಡಿಕೆ ಬೆಳೆಗಾರರ ಭವಿಷ್ಯದ ಜೊತೆ ಸರ್ಕಾರವು ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಹಾಗೂ ಕೇರಳ ಮತ್ತು ಇನ್ನಿತರ ರಾಜ್ಯಗಳಲ್ಲಿ ಸಾಕಷ್ಟು ಅಡಿಕೆಯನ್ನು ಬೆಳೆಯಲಾಗುತ್ತಿದೆ. ಕಾಳುಮೆಣಸು, ಶುಂಠಿಯನ್ನು ಕೂಡಾ ಬೆಳೆಯಲಾಗುತ್ತಿದೆ. ಹಾಗಿದ್ದರೂ ಆಮದು ಅಗತ್ಯ ಇಲ್ಲ. ದೇಶದ ರೈತರ ಆದಾಯ ದ್ವಿಗುಣ ಮಾಡುವ ನೀತಿ ಹೊಂದಿರುವ ಕೇಂದ್ರ ಸರ್ಕಾರವು, ಭಾರತಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸನ್ನು ನಮ್ಮ ರೈತರೇ ಉತ್ಪಾದಿಸುವಾಗ ಆಮದು ಮಾಡಿಕೊಳ್ಳುವ ಅಗತ್ಯವೇನಿದೆ . ಈಗ ಆಮದು ನೀತಿಯ ಮೂಲಕ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ತಕ್ಷಣವೇ ಆಮದು ರದ್ದು ಪಡಿಸಬೇಕು ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸುತ್ತದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

Advertisement

ರಾಜ್ಯದಲ್ಲಿ  ಗುಣಮಟ್ಟದ ಅಡಿಕೆ ಹಾಗೂ ಕಾಳುಮೆಣಸು ಬೆಳೆಯುತ್ತಿದೆ. ಕೇಂದ್ರ ಸರ್ಕಾರವು ಭೂತಾನ್‌ನಿಂದ ಅಡಿಕೆಯನ್ನು ಹಾಗೂ ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಕಾಳುಮೆಣಸು ಅನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡಲು ನಿರ್ಧರಿಸಿದೆ.  ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳಲು ನಿರ್ಧರಿಸಿರುವ ಅಡಿಕೆ, ಮೆಣಸು ಕಡಿಮೆ ಗುಣಮಟ್ಟದ್ದಾಗಿವೆ. ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಮಿಶ್ರವಾಗುವುದರಿಂದ ಸ್ವದೇಶಿ ಅಡಿಕೆ ಹಾಗೂ ಕಾಳುಮೆಣಸಿನ ಬಗ್ಗೆ ಗ್ರಾಹಕರಲ್ಲಿ ತಪ್ಪು ಕಲ್ಪನೆ ಮೂಡಲಿದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಆಮದು ವೇಳೆ ಕಾನೂನು ಉಲ್ಲಂಘನೆ ಈಗಾಗಲೇ ಅಡಿಕೆ ಹಾಗೂ ಕಾಳುಮೆಣಸು ಆಮದಿಗೆ ಸಂಬಂಧಿಸಿ ಪ್ರಭಾವಿಗಳಿಂದ ಸಫೆಮಾ, ಫೆರಾ ಮುಂತಾದ ಕಾನೂನುಗಳ ಉಲ್ಲಂಘನೆಯಾಗಿರುವುದು ಕಂಡು ಬರುತ್ತಿದೆ, ಈ ಬಗ್ಗೆಯೂ  ತನಿಖೆಯಾಗಬೇಕು ಎಂಬುದು ಆಮ್‌ ಆದ್ಮಿ ಪಾರ್ಟಿಯ ಆಗ್ರಹವಾಗಿದೆ ಎಂದು ಹೇಳಿದರು.

Advertisement

ಸರ್ಕಾರವು ಅಡಿಕೆ ಮತ್ತು ಕಾಳುಮೆಣಸನ್ನು ಆಮದು ಮಾಡಿಕೊಂಡರೆ ಅವುಗಳ ಮೇಲೆ ಭಾರೀ ಆಮದು ಸುಂಕವನ್ನು ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿ ಆಮದು ಸುಂಕ ನೀತಿಯ  ಬಳಸಿಕೊಂಡು ಆಮದುದಾರರಿಗೆ ಅವಕಾಶ ನೀಡಬಾರದು.ಸರ್ಕಾರಕ್ಕೆ ರೈತರ ಹಿತ ಕಪಾಡಲು ಮನಸ್ಸಿದ್ದರೆ ಈಗಲೂ ಇಂತಹ ಅವಕಾಶ ಇದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಎಎಪಿಯ ಬೆಂಗಳೂರು ನಗರ ಮಾಧ್ಯಮ ವಕ್ತಾರ ಉಷಾ ಮೋಹನ್‌, ಬೆಂಗಳೂರು ನಗರ ಎಎಪಿ ಉಪಾಧ್ಯಕ್ಷ ಬಿಟಿ ನಾಗಣ್ಣ ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror