ಈ ದೇಶದಲ್ಲಿ ಗುಣಮಟ್ಟದ ಅಡಿಕೆ ಇರುವಾಗ ಕಳಪೆ ಗುಣಮಟ್ಟದ ಅಡಿಕೆ ಆಮದು ಏಕೆ ಮಾಡಿಕೊಳ್ಳಬೇಕು?. ಈ ರಾಜ್ಯದಲ್ಲಿ ಸಾಕಷ್ಟು ಅಡಿಕೆ ಬೆಳೆಯಲಾಗುತ್ತದೆ. ಹೀಗಿರುವಾಗ ಅಡಿಕೆ ಆಮದು ಅನಿವಾರ್ಯ ಏಕೆ ?. ಮೊದಲು ಈ ದೇಶದ ಕೃಷಿಕರ ರಕ್ಷಣೆಯಾಗಲಿ, ಆಮದು ನಿಯಮಗಳಿಂದ ಕರ್ನಾಟಕದ ಅಡಿಕೆ ಮತ್ತು ಕಾಳುಮೆಣಸು ಬೆಳಗಾರರಿಗೆ ಸಂಕಷ್ಟ ಎದುರಾಗಲಿದೆ ಎಂದು ಆಮ್ ಆದ್ಮಿ ಪಕ್ಷ ಎಚ್ಚರಿಸಿದೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖಂಡ ಬ್ರಿಜೇಶ್ ಕಾಳಪ್ಪ, ಅಡಿಕೆ, ಕಾಳುಮೆಣಸು ಹಾಗೂ ಶುಂಠಿ ಮೊದಲಾದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ದೇಶದ ಕೃಷಿಕರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ.ರಾಜ್ಯದ ಅಡಿಕೆ ಬೆಳೆಗಾರರ ಭವಿಷ್ಯದ ಜೊತೆ ಸರ್ಕಾರವು ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಹಾಗೂ ಕೇರಳ ಮತ್ತು ಇನ್ನಿತರ ರಾಜ್ಯಗಳಲ್ಲಿ ಸಾಕಷ್ಟು ಅಡಿಕೆಯನ್ನು ಬೆಳೆಯಲಾಗುತ್ತಿದೆ. ಕಾಳುಮೆಣಸು, ಶುಂಠಿಯನ್ನು ಕೂಡಾ ಬೆಳೆಯಲಾಗುತ್ತಿದೆ. ಹಾಗಿದ್ದರೂ ಆಮದು ಅಗತ್ಯ ಇಲ್ಲ. ದೇಶದ ರೈತರ ಆದಾಯ ದ್ವಿಗುಣ ಮಾಡುವ ನೀತಿ ಹೊಂದಿರುವ ಕೇಂದ್ರ ಸರ್ಕಾರವು, ಭಾರತಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸನ್ನು ನಮ್ಮ ರೈತರೇ ಉತ್ಪಾದಿಸುವಾಗ ಆಮದು ಮಾಡಿಕೊಳ್ಳುವ ಅಗತ್ಯವೇನಿದೆ . ಈಗ ಆಮದು ನೀತಿಯ ಮೂಲಕ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ತಕ್ಷಣವೇ ಆಮದು ರದ್ದು ಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸುತ್ತದೆ ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
ರಾಜ್ಯದಲ್ಲಿ ಗುಣಮಟ್ಟದ ಅಡಿಕೆ ಹಾಗೂ ಕಾಳುಮೆಣಸು ಬೆಳೆಯುತ್ತಿದೆ. ಕೇಂದ್ರ ಸರ್ಕಾರವು ಭೂತಾನ್‌ನಿಂದ ಅಡಿಕೆಯನ್ನು ಹಾಗೂ ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಕಾಳುಮೆಣಸು ಅನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡಲು ನಿರ್ಧರಿಸಿದೆ. ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳಲು ನಿರ್ಧರಿಸಿರುವ ಅಡಿಕೆ, ಮೆಣಸು ಕಡಿಮೆ ಗುಣಮಟ್ಟದ್ದಾಗಿವೆ. ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಮಿಶ್ರವಾಗುವುದರಿಂದ ಸ್ವದೇಶಿ ಅಡಿಕೆ ಹಾಗೂ ಕಾಳುಮೆಣಸಿನ ಬಗ್ಗೆ ಗ್ರಾಹಕರಲ್ಲಿ ತಪ್ಪು ಕಲ್ಪನೆ ಮೂಡಲಿದೆ ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
ಆಮದು ವೇಳೆ ಕಾನೂನು ಉಲ್ಲಂಘನೆ ಈಗಾಗಲೇ ಅಡಿಕೆ ಹಾಗೂ ಕಾಳುಮೆಣಸು ಆಮದಿಗೆ ಸಂಬಂಧಿಸಿ ಪ್ರಭಾವಿಗಳಿಂದ ಸಫೆಮಾ, ಫೆರಾ ಮುಂತಾದ ಕಾನೂನುಗಳ ಉಲ್ಲಂಘನೆಯಾಗಿರುವುದು ಕಂಡು ಬರುತ್ತಿದೆ, ಈ ಬಗ್ಗೆಯೂ ತನಿಖೆಯಾಗಬೇಕು ಎಂಬುದು ಆಮ್ ಆದ್ಮಿ ಪಾರ್ಟಿಯ ಆಗ್ರಹವಾಗಿದೆ ಎಂದು ಹೇಳಿದರು.
ಸರ್ಕಾರವು ಅಡಿಕೆ ಮತ್ತು ಕಾಳುಮೆಣಸನ್ನು ಆಮದು ಮಾಡಿಕೊಂಡರೆ ಅವುಗಳ ಮೇಲೆ ಭಾರೀ ಆಮದು ಸುಂಕವನ್ನು ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿ ಆಮದು ಸುಂಕ ನೀತಿಯ ಬಳಸಿಕೊಂಡು ಆಮದುದಾರರಿಗೆ ಅವಕಾಶ ನೀಡಬಾರದು.ಸರ್ಕಾರಕ್ಕೆ ರೈತರ ಹಿತ ಕಪಾಡಲು ಮನಸ್ಸಿದ್ದರೆ ಈಗಲೂ ಇಂತಹ ಅವಕಾಶ ಇದೆ ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
ಎಎಪಿಯ ಬೆಂಗಳೂರು ನಗರ ಮಾಧ್ಯಮ ವಕ್ತಾರ ಉಷಾ ಮೋಹನ್, ಬೆಂಗಳೂರು ನಗರ ಎಎಪಿ ಉಪಾಧ್ಯಕ್ಷ ಬಿಟಿ ನಾಗಣ್ಣ ಉಪಸ್ಥಿತರಿದ್ದರು.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…