ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.
ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ.
ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು.
ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…