ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

April 23, 2023
9:10 AM

2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ ಅಡ್ಡಾಗೆ ಪ್ರಧಾನಿ ಮೋದಿ ಕರೆತರುವ ಮೂಲಕ ಜೆಡಿಎಸ್  ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.

Advertisement

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಅದರ ಮುಂದುವರಿದ ಭಾಗವಾಗಿ ಮಂಡ್ಯ, ರಾಮನಗರ ಜಿಲ್ಲೆಗಳನ್ನೊಳಗೊಂಡಂತೆ 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಏ. 30ರಂದು ಚನ್ನಪಟ್ಟಣದಲ್ಲಿ ಬೃಹತ್ ಬಹಿರಂಗ ಸಮಾವೇಶ ಆಯೋಜನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎದುರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡಿರುವ ಹಿನ್ನಲೆಯಲ್ಲಿ ಮೋದಿ ಆಗಮನ ಸಿಪಿವೈಗೆ ಮತ್ತಷ್ಟು ಬಲನೀಡಲಿದೆ. ಈ ಮೂಲಕ ಹೆಚ್‍ಡಿಕೆ ಮಣಿಸುವ ಕಾರ್ಯತಂತ್ರವನ್ನು ಬಿಜೆಪಿ ಮಾಡುತ್ತಿದೆ. ಅಲ್ಲದೇ ಮೋದಿ ಮೂಲಕ ಹಿಂದೂ ಮತಗಳ ಕ್ರೂಢೀಕರಿಸಿ ಚನ್ನಪಟ್ಟಣದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿ ಬಹಿರಂಗ ಸಮಾವೇಶಕ್ಕೆ ಚನ್ನಪಟ್ಟಣದ ಹೊರವಲಯದಲ್ಲಿ ಸುಮಾರು 30 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೋದಿ ಆಗಮನದಿಂದ ಹಳೇ ಮೈಸೂರು ಭಾಗದ ಬಿಜೆಪಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |
April 6, 2025
6:08 PM
by: ಸಾಯಿಶೇಖರ್ ಕರಿಕಳ
ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group