Advertisement
ಸುದ್ದಿಗಳು

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

Share

 ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮೇಲೆ ಕಾಂಗ್ರೆಸ್ ನಾಯಕರಿಂದ ಅವಹೇಳನಕಾರಿ ವಾಗ್ದಾಳಿ ಮುಂದುವರಿದಿದೆ. ಪ್ರಧಾನಿಗೆ ನಿರಂತರವಾಗಿ ಅವಮಾನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೋಡಿದಾಗ ಕಾಂಗ್ರೆಸ್ ಸೋಲಿನ ಹತಾಶೆಯಲ್ಲಿರುವುದು ಕಂಡುಬರುತ್ತದೆ ಎಂದು ಅವರು ಹೇಳಿದ್ದಾರೆ.

ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸಹ ಸೋಲುವ ಭೀತಿಯಲ್ಲಿದ್ದಾರೆ. ಅಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇಂದು ಮತ್ತೆ ದಿಲೀಪ್ ಕುಮಾರ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಂಧಿನಗರದಲ್ಲೂ ಕಾರ್ತಿಕ್, ಅರುಣ್ ಎಂಬುವರ ಮೇಲೆ ದಾಳಿ ನಡೆದಿದೆ. ಬಿಜೆಪಿಯ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಚೇಲಾಗಳು ಆಸ್ಪತ್ರೆಯಲ್ಲಿ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಬೆದರಿಕೆಗೆ ಜಗ್ಗಲ್ಲ, ನಾವು ಕಾರ್ಯಕರ್ತರ ಜೊತೆ ಇದ್ದೇವೆ‌. ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ ಎಂದು ಶೋಭಾ ಹೇಳಿದ್ದಾರೆ.

ಇದಕ್ಕೂ ಮುನ್ನ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ತಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯಿಂದ ಸಂಸ್ಕಾರ ಪಡೆದಿದ್ದಾರೆ. ಅವರ ಇಂತಹ ಮಾತುಗಳಿಗೆ ನಾವೇನು ಮಾಡಲಾಗದು. ಅವಹೇಳನಾಕಾರಿಯಾಗಿ ಮಾತನಾಡುವುದು ಖರ್ಗೆ ಕುಟುಂಬದ ಸಂಸ್ಕೃತಿ. ಇಂತಹ ಹೇಳಿಕೆ ನಮ್ಮ ಸಂಸ್ಕಾರ ಅಲ್ಲವೆಂದು ವಿಜಯಪುರದಲ್ಲಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ.

ಕಲಬುರಗಿ ನಗರದಲ್ಲಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಈ ಹಿಂದೆ ಪ್ರಧಾನಿ ಕಲಬುರಗಿಗೆ ಬಂದು ಲಂಬಾಣಿ ಜನರಿಗೆ ಹಕ್ಕು ಪತ್ರ ನೀಡಿದ್ದರು. ಆಗ ನಾನು ನಿಮ್ಮ ಮಗ ಅಂತ ಲಂಬಾಣಿ ಜನರಿಗೆ ಹೇಳಿದ್ದರು. ಆದ್ರೆ ನಂತರ ಆ ಸಮಾಜಕ್ಕೆ ಏನು ಮಾಡಿದ್ದರು? ಒಳ ಮೀಸಲಾತಿಗೆ ಆ ಸಮಾಜ ಹೋರಾಟ ಮಾಡಿತ್ತು. ಆಗ ಪ್ರಧಾನಿ ಮೋದಿ ಎಲ್ಲಿದ್ದರು ಎಂದು ಪ್ರಶ್ನಿಸಿದ್ದರು. ಜತೆಗೆ, ಮನೆ ನಡೆಸಲು ಆಗದವರು ಎಂದು ಹೇಳಿದ್ದರ ಜತೆಗೆ ಅವಹೇಳನಕಾರಿ ಪದ ಬಳಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

10 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago