ಕಾಂಗ್ರೆಸ್​ ಅಧಿಕಾರಿಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ಧರಾಮಯ್ಯ ಭರವಸೆ

April 27, 2023
8:17 AM

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಕೋರ್ಟ್​ ತಡೆ ನೀಡಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಕುರಿತು ಕಾಂಗ್ರೆಸ್ ನಿಲುವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್​ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ 75 ಕ್ಕೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ, ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ.

Advertisement

ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ ಎಂದಿದ್ದಾರೆ.

ಅಮಿತ್ ಶಾ ವಿರುದ್ಧ ಸಿದ್ಧರಾಮಯ್ಯ ಕಿಡಿ

ಗೃಹ ಸಚಿವ ಅಮಿತ್​ ಶಾ ವಿರುದ್ಧ ಹಿರಿಯ್ದಿರುವ ಸಿದ್ಧರಾಮಯ್ಯ, ಗೃಹ ಸಚಿವ ಅಮಿತ್​ ಶಾ ಅವರೇ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡಲು ಮುಸ್ಲಿಮರ ಮೀಸಲಾತಿಯನ್ನು ಇಲ್ಲವೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗ-ಲಿಂಗಾಯತರ ಮೀಸಲಾತಿ ಕಡಿತಗೊಳಿಸಬೇಕಾಗಿಲ್ಲ.

Advertisement

ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಈ ವಿವಾದವನ್ನು ಸುಲಭದಲ್ಲಿ ಬಗೆಹರಿಸಬಹುದು. ಬಿಜೆಪಿಗೆ ಒಕ್ಕಲಿಗರು-ಲಿಂಗಾಯತರ ಮೀಸಲಾತಿ ಹೆಚ್ಚಿಸುವ ಸದುದ್ದೇಶ ಇರಲಿಲ್ಲ. ಮುಸ್ಲಿಮರ ಮೀಸಲಾತಿಯನ್ನು ರದ್ದು ಮಾಡುವ ದುರುದ್ದೇಶವಷ್ಟೇ ಇತ್ತು. ಇದನ್ನು ಅರ್ಥಮಾಡಿಕೊಂಡೇ ಸುಪ್ರೀಂ ಕೋರ್ಟ್ ಸರ್ಕಾರದ ಮೀಸಲಾತಿ ನೀತಿಗೆ ತಡೆಯಾಜ್ಞೆ ನೀಡಿರುವುದು ಎಂದು ಕಿಡಿಕಾರಿದ್ದಾರೆ.

ನಮ್ಮ ಪಕ್ಷ ಮೀಸಲಾತಿ ಹೆಚ್ಚಳ ಪರವಾಗಿದೆ

ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ.

Advertisement

ಸಂವಿಧಾನಕ್ಕೆ ತಿದ್ದುಪಡಿ ತರಬೇಕು

ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್​ಗೆ ಸೇರಿಸಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror