ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾಪಕ್ಕೆ ಮೋದಿ ಟಾಂಗ್

May 2, 2023
7:04 PM

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಕಾಂಗ್ರೆಸ್​ ಪ್ರಣಾಳಿಕೆಗೆ ತಿರುಗೇಟು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಬೆನ್ನಲ್ಲೇ ಮೋದಿ ತಿರುಗೇಟು ನೀಡಿದ್ದಾರೆ.

Advertisement
Advertisement
Advertisement

ಕಾಂಗ್ರೆಸ್​ನಿಂದ ಬರೀ ಸುಳ್ಳಿನ ಆಶ್ವಾಸನೆ; ಮೋದಿ

ಭಾರತ ಅಭಿವೃದ್ದಿಯಾಗಬೇಕಾದರೆ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ನೀವು ಈಗ ನೋಡುತ್ತಿದ್ದೀರಿ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಮೋದಿ ಗುಡುಗಿದರು.

Advertisement

ಕೋವಿಡ್ ಸಾಂಕ್ರಾಮಿಕವನ್ನು ಭಾರತ ಸಮರ್ಥವಾಗಿ ಎದುರಿಸಿತು. ಇದು ಜಗತ್ತೇ ಹುಬ್ಬೇರಿಸುವಂತೆ ಮಾಡಿತು. ಸದ್ಯ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರುತ್ತದೆ. ಇದನ್ನು ನಾವು ಸಾಧಿಸಬೇಕು ಎಂದರೆ ನಮಗೆ ಬಹಳ ದೊಡ್ಡ ಸಹಾಯ ಮಾಡುವುದು ಕರ್ನಾಟಕ. ನಾವು ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ. ಎಲ್ಲ ಕ್ಷೇತ್ರಗಳಿಗೂ ಉತ್ತೇಜನ ನೀಡುತ್ತೇವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಮತ್ತು ಜೆಡಿಎಸ್​​ ಅವರ ಮೋಸಕ್ಕೆ ಒಳಗಾಗಬಾರದು ಎಂದು ಮೋದಿ ಹೇಳಿದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ರೂ. ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ರೂ. ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ರೈತರಿಗೆ ಡಬಲ್​ ಲಾಭವಾಗುತ್ತಿದೆ ಎಂದು ಮೋದಿ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮೇಲೆ ಕ್ಯಾನ್ಸರ್‌ ತೂಗುಗತ್ತಿಯ ಭಯ ಏಕೆ ? | ಅಡಿಕೆಯ ಔಷಧೀಯ ಅಧ್ಯಯನ ಸಾಕಷ್ಟಿದೆ | ಈಗ ಸಂಘಟಿತ ಹೋರಾಟ ಅಗತ್ಯ |
November 22, 2024
9:02 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror