ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್ನ ಈ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಕಾಂಗ್ರೆಸ್ ಪ್ರಣಾಳಿಕೆಗೆ ತಿರುಗೇಟು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಬೆನ್ನಲ್ಲೇ ಮೋದಿ ತಿರುಗೇಟು ನೀಡಿದ್ದಾರೆ.
ಭಾರತ ಅಭಿವೃದ್ದಿಯಾಗಬೇಕಾದರೆ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ನೀವು ಈಗ ನೋಡುತ್ತಿದ್ದೀರಿ. ಕಾಂಗ್ರೆಸ್ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಮೋದಿ ಗುಡುಗಿದರು.
ಕೋವಿಡ್ ಸಾಂಕ್ರಾಮಿಕವನ್ನು ಭಾರತ ಸಮರ್ಥವಾಗಿ ಎದುರಿಸಿತು. ಇದು ಜಗತ್ತೇ ಹುಬ್ಬೇರಿಸುವಂತೆ ಮಾಡಿತು. ಸದ್ಯ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರುತ್ತದೆ. ಇದನ್ನು ನಾವು ಸಾಧಿಸಬೇಕು ಎಂದರೆ ನಮಗೆ ಬಹಳ ದೊಡ್ಡ ಸಹಾಯ ಮಾಡುವುದು ಕರ್ನಾಟಕ. ನಾವು ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯ ಮಾಡುತ್ತೇವೆ. ಎಲ್ಲ ಕ್ಷೇತ್ರಗಳಿಗೂ ಉತ್ತೇಜನ ನೀಡುತ್ತೇವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮತ್ತು ಜೆಡಿಎಸ್ ಅವರ ಮೋಸಕ್ಕೆ ಒಳಗಾಗಬಾರದು ಎಂದು ಮೋದಿ ಹೇಳಿದರು.
ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ರೂ. ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ರೂ. ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ರೈತರಿಗೆ ಡಬಲ್ ಲಾಭವಾಗುತ್ತಿದೆ ಎಂದು ಮೋದಿ ಹೇಳಿದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…