ಬಿಜೆಪಿಯ ಮೊದಲ ಪಟ್ಟಿಯ ಅಭ್ಯರ್ಥಿ ಪಟ್ಟಿಯನ್ನು ಬುಧವಾರದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ನಾಯಕರು ಸಮ್ಮತಿಸದ ಕಾರಣ ಘೋಷಣೆ ಮುಂದೂಡಲಾಗಿದೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರದೊಳಗೆ ಬಿಡುಗಡೆ ಮಾಡಲಾಗುವುದು. ಪಟ್ಟಿ ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದರು.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಮಾಡಿದ ಸಲಹೆಗಳ ಕುರಿತು ಚರ್ಚಿಸಿ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ಇಂದು ನವದೆಹಲಿಯಲ್ಲಿ ಚರ್ಚೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಬೊಮ್ಮಾಯಿ, ಅವರ ಹಿಂದಿನ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯದ ಇತರ ನಾಯಕರು ಈ ಸಭೆಗಳಲ್ಲಿ ಭಾಗವಹಿಸಿದ್ದರು.
ಶಿಸ್ತಿನ ಪಕ್ಷ ಬಿಜೆಪಿಯ ಮೊದಲ ಪಟ್ಟಿ ಇನ್ನೂ ಬಿಡುಗಡೆ ಆಗದೇ ಇರುವುದಕ್ಕೆ ವಿಪಕ್ಷಗಳು ವ್ಯಂಗ್ಯವಾಡಿವೆ. ಚುನಾವಣೆಯ ಮುನ್ನಾ ದಿನವೇ ಘೋಷಣೆ ಮಾಡಬಹುದು ಎಂದು ವ್ಯಂಗ್ಯವಾಡಿವೆ.