Advertisement
ಸುದ್ದಿಗಳು

ಮತದಾನ ಆರಂಭ: ಓಟು ಹಾಕುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿ

Share

ಐದು ವರ್ಷಕ್ಕೊಮ್ಮೆ ಬರುವ ಪ್ರಜಾಪ್ರಭುತ್ವದ ಹಬ್ಬಕ್ಕೆ ಇಡೀ ರಾಜ್ಯ ಸಜ್ಜಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸುದೀರ್ಘ ಕಾಲ ನಡೆದ ಅಬ್ಬರದ ಪ್ರಚಾರ, ನಾನಾ ರಣತಂತ್ರಗಳಿಗೆ ಇಂದು ಮತದಾರ ಉತ್ತರ ನೀಡಲಿದ್ದಾನೆ. ಇನ್ನು ರಾಜ್ಯದ್ದೇ ಒಂದು ಲೆಕ್ಕವಾದ್ರೆ ರಾಜ್ಯ ರಾಜಧಾನಿ ಬೆಂಗಳೂರಿನದ್ದೇ ಒಂದು ಲೆಕ್ಕ. ಇಲ್ಲಿ ಬರೋಬ್ಬರಿ 28 ಕ್ಷೇತ್ರಗಳು ಇರೋದ್ರಿಂದ ಮೂರು ಪಕ್ಷಗಳ ಕಣ್ಣು ಬೆಂಗಳೂರಿನ ಮೇಲೆಯೇ ಇದೆ. ಹೀಗಾಗಿ ಮೂರು ಪಕ್ಷಗಳು ಇಲ್ಲಿ ಅಬ್ಬರದ ಪ್ರಚಾರವನ್ನೇ ಮಾಡಿದ್ವು. ಅದೇ ಪ್ರಚಾರಕ್ಕೆ ಇಂದು ಉತ್ತರ ಸಿಗಲಿದೆ. ಮತದಾರನ ಹಕ್ಕು ಚಲಾವಣೆಗೆ ಸಮಯ ನಿಗದಿಯಾಗಿದ್ದು ಮತದಾನ ಶುರುವಾಗಿದೆ.

Advertisement
Advertisement
Advertisement

ಬೆಳಗ್ಗೆ 7 ರಿಂದ ಸಂಜೆ 6 ರವರೆಗೂ ಮತದಾನ

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಳು ಸೇರಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ  ಮತದಾನಕ್ಕೆ ಚುನಾವಣಾ ಅಯೋಗ ಭರ್ಜರಿ ತಯಾರಿ ಮಾಡಿಕೊಂಡಿದ್ದು ಮತದಾನ ಆರಂಭವಾಗಿದೆ.  ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಏಕ ಕಾಲದಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗಳಿಗೆ, ಇವಿಎಂ ಹಾಗೂ ವಿವಿಪ್ಯಾಟ್ ಗೆ ಪೂಜೆ ಸಲ್ಲಿಸಲಾಗಿದ್ದು ಮತದಾನ ಶುರುವಾಗಿದೆ.

Advertisement

ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮಾರ ಕಣ್ಗಾವಲು

ಇನ್ನು ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯ ಸುತ್ತ ಸಿಸಿ ಕ್ಯಾಮಾರ ಅಳವಡಿಕೆ ಮಾಡಿದ್ದು ಜಿಲ್ಲಾ ಚುನಾವಣಾ ಆಯೋಗ ಪ್ರತಿ ಮತಗಟ್ಟೆಗೆ 5 ಜನ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮಾರ ಅಳವಡಿಕೆ ಮಾಡಿದೆ. 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ಅಂಗವಿಕಲರಿಗೆ ಉಚಿತ ಕ್ಯಾಬ್ ವ್ಯವಸ್ಥೆ ಮಾಡಿದ್ದು ಮತ ಕೇಂದ್ರದ ಬಳಿ ಕಾರ್ ಪಾರ್ಕಿಂಗ್ ಹಾಗೂ ಌಪ್ ಮೂಲಕ ನೊಂದಣಿ ಮಾಡಿಕೊಂಡವರಿಗೆ ನೇರವಾಗಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮತಗಟ್ಟೆಯ 200 ಮೀಟರ್ ಒಳಗೆ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ನಿಷೇಧ ಮಾಡಿ ಆಯೋಗ ಆದೇಶ ಹೊರಡಿಸಿದೆ.

ಗಮನ ಸೆಳೆಯುತ್ತಿವೆ ವಿಶೇಷ ಮತಗಟ್ಟೆಗಳು

ಮತದಾರರನ್ನ ಮತಗಟ್ಟೆಗೆ ಸೆಳೆಯೋ ಉದ್ದೇಶದಿಂದ ಥೀಮ್ ಬೇಸ್ಡ್ ಮತಗಟ್ಟೆಗಳ ನಿರ್ಮಾಣ ಮಾಡಿದೆ. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 264 ಮತಗಟ್ಟೆ ನಿರ್ಮಾಣ ಮಾಡಲಾಗಿದೆ. ಮಹಿಳಾ ಮತದಾರರನ್ನ ಪ್ರೋತ್ಸಾಹಿಸಲು ಪಿಂಕ್ ಮತಗಟ್ಟೆ, ಯುವ ಮತದಾರರನ್ನ ಸೆಳೆಯಲು ಯುವ ಮತಗಟ್ಟೆ , ಸಿರಿಧಾನ್ಯ ಮತಗಟ್ಟೆ ಹಾಗೂ ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿಯ ಮತಗಟ್ಟೆ, ಕ್ರೀಡಾ ಮತಗಟ್ಟೆ ಅಂತೆಲ್ಲಾ ಹಲವು ಮಾದರಿಯ ಮತಗಟ್ಟೆಗಳನ್ನ ನಿರ್ಮಾಣ ಮಾಡಿದೆ. ಮಹಿಳೆಯರಿಗಾಗಿ ಪ್ರತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐದು ಸಖಿ ಮತಗಟ್ಟೆಗಳನ್ನ ನಿರ್ಮಾಣ ಮಾಡಿದೆ.

Advertisement

97 ಲಕ್ಷ ಮತದಾರರಿಂದ ಹಕ್ಕು ಚಲಾವಣೆ

ಬಿಬಿಎಂಪಿ ವ್ಯಾಪ್ತಿಯ28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8802 ಮತಗಟ್ಟೆಗಳಿದ್ದು, 97ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾವಣೆ ಮಾಡಲಿದ್ದಾರೆ. 1.43 ಲಕ್ಷ ಯುವ ಮತದಾರರು ಈ ಬಾರಿ ಈ ಪಟ್ಟಿಯಲ್ಲಿ ಸೇರಿರುವುದು ವಿಶೇಷವಾಗಿದೆ.

ಡಿಸ್ಕೌಂಟ್ ಕೊಡುವವರಿಗೆ ಆಯೋಗದ ಬ್ರೇಕ್

ಜನರಲ್ಲಿ ಮತಜಾಗೃತಿಗೆ ಮುಂದಾಗಿದ್ದ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ಹಿನ್ನಲೆ ಈ ರೀತಿಯ ಪ್ರಕಟನೆ ನೀಡುವ ಮಾಲೀಕರ ವಿರುದ್ಧ ಕ್ರಮಕ್ಕೆ ಮುಂದಾಗ್ತೀವೆ ಅಂದಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

22 hours ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

22 hours ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

1 day ago

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…

2 days ago

ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |

ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…

2 days ago

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…

4 days ago